9 ವರ್ಷಗಳ ಬಳಿಕ ಶ್ರೀಲಂಕಾದಲ್ಲಿ ಮೊದಲ ಟೆಸ್ಟ್ ಸರಣಿ ಆಡಲಿರುವ ಭಾರತ
Update: 2026-07-02 21:37 IST
ಸಾಂದರ್ಭಿಕ ಚಿತ್ರ | Photo Credit : PTI
ಕೊಲಂಬೊ, ಜು.2: ಭಾರತ ಕ್ರಿಕೆಟ್ ತಂಡವು ಆಗಸ್ಟ್ ತಿಂಗಳಲ್ಲಿ ಶ್ರೀಲಂಕಾದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಗುರುವಾರ ಪ್ರಕಟಿಸಿದೆ. 9 ವರ್ಷಗಳಲ್ಲಿ ಇದೇ ಮೊದಲ ಬಾರಿ ಶ್ರೀಲಂಕಾದಲ್ಲಿ ಭಾರತ ತಂಡವು ಟೆಸ್ಟ್ ಸರಣಿಯನ್ನು ಆಡಲಿದೆ.
ಸರಣಿಯ ಮೊದಲ ಪಂದ್ಯವು ಆಗಸ್ಟ್ 15ರಿಂದ ಗಾಲೆ ಅಂತರ್‌ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಪಂದ್ಯವು 23ರಿಂದ ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲ್ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಭಾರತ ತಂಡವು 2017ರಲ್ಲಿ ಕೊನೆಯ ಬಾರಿ ಶ್ರೀಲಂಕಾದಲ್ಲಿ ಟೆಸ್ಟ್ ಪಂದ್ಯ ಆಡಿತ್ತು.