×
Ad

36 ರನ್‌ಗಳಿಗೆ ಪಾಕಿಸ್ತಾನದ 8 ವಿಕೆಟ್‌ ಕಿತ್ತ ಭಾರತ !

Update: 2023-10-14 19:21 IST

Photo : cricketworldcup.com

ಅಹ್ಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ಪಂದ್ಯಲ್ಲಿ ಭಾರತ ತಂಡ ಪಾಕಿಸ್ತಾನದ ಕೊನೆಯ ಎಂಟು ವಿಕೆಟ್‌ಗಳನ್ನು 36 ರನ್‌ಗಳಿಗೆ ಕಬಳಿಸಿತು.

ಬಾಬರ್‌ ಅಝಮ್ ವಿಕೆಟ್‌ ಪತನವಾಗುತ್ತಿದ್ದಂತೆ ನಡೆದ ಈ ಬೆಳವಣಿಗೆ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ತುಂಬಿ ತುಳುಕಿದ್ದ ಭಾರತ ತಂಡದ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಸಿತು.

ಅಂತಿಮವಾಗಿ ಭಾರತದ ಬೌಲಿಂಗ್‌ ಪಡೆ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಪಾಕಿಸ್ತಾನ ತಂಡವನ್ನು ಆಲೌಟ್ ಮಾಡಿತು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು. ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಐವರು ಬೌಲರ್‌ಗಳು ಇನ್ನಿಂಗ್ಸ್‌ನಲ್ಲಿ ತಲಾ ಎರಡು ವಿಕೆಟ್ ಪಡೆದದ್ದು ಇದು ಮೂರನೇ ಬಾರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News