×
Ad

ಮಹಿಳೆಯರ T20 ವಿಶ್ವಕಪ್ | ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

Update: 2026-06-21 23:50 IST

Photo : PTI

ಮ್ಯಾಂಚೆಸ್ಟರ್, ಜೂ.21: ಮಹಿಳೆಯರ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರ 18ನೇ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ 6 ವಿಕೆಟ್‌ ಗಳ ಅಂತರದಿಂದ ಸೋಲು ಅನುಭವಿಸಿದೆ.

ರವಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ನಿಗದಿತ 20 ಓವರ್‌ ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 158 ರನ್ ಗಳಿಸಿತು. ಶೆಫಾಲಿ ವರ್ಮಾ (31 ರನ್) ಸರ್ವಾಧಿಕ ಸ್ಕೋರ್ ಗಳಿಸಿದರು.

ಗೆಲ್ಲಲು 159 ರನ್‌ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡವು 19.1 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 161 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮರಿಝಾನ್ ಕಾಪ್ (ಔಟಾಗದೆ 81, 45 ಎಸೆತ) ಹಾಗೂ ತಝ್ಮಿನ್ ಬ್ರಿಟ್ಸ್ (40 ರನ್, 36 ಎಸೆತ) ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಭಾರತದ ಪರ ಶ್ರೀ ಚರಣಿ (3-24) ಯಶಸ್ವಿ ಪ್ರದರ್ಶನ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News