ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಗುಲಾಬಿ ಬಣ್ಣದ ಜೆರ್ಸಿ ಧರಿಸಿ ಆಡಿದ ಭಾರತದ ಮಹಿಳಾ ಕ್ರಿಕೆಟ್ ತಂಡ
Update: 2025-09-20 22:05 IST
PC : PTI
ಮುಂಬೈ, ಸೆ.20: ಐತಿಹಾಸಿಕ ಹೆಜ್ಜೆಯೊಂದರಲ್ಲಿ ಭಾರತೀಯ ಮಹಿಳೆಯರ ಕ್ರಿಕೆಟ್ ತಂಡವು ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಆಸ್ಟ್ರೇಲಿಯ ತಂಡದ ವಿರುದ್ಧ ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶನಿವಾರ ನಡೆದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಗುಲಾಬಿ ಬಣ್ಣದ ಜೆರ್ಸಿ ಧರಿಸಿ ಆಡಿದೆ.
ಮಧ್ಯಾಹ್ನ 1 ಗಂಟೆಗೆ ನಡೆದ ಟಾಸ್ ವೇಳೆ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಪಿಂಕ್ ಬಣ್ಣದ ಜೆರ್ಸಿ ಧರಿಸಿ ಆಗಮಿಸಿದರು. ಭಾರತೀಯ ಕ್ರಿಕೆಟ್ ತಂಡವು ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಇದೇ ಮೊದಲ ಬಾರಿ ಗುಲಾಬಿ ಬಣ್ಣದ ಜೆರ್ಸಿ ಧರಿಸಿದೆ.
ಆಸ್ಟ್ರೇಲಿಯದಲ್ಲಿ ಹೊಸ ವರ್ಷದಂದು ಸಿಡ್ನಿಯಲ್ಲಿ ನಡೆಯುವ ಟೆಸ್ಟ್ ಪಂದ್ಯದ ವೇಳೆ ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಪ್ರತೀ ವರ್ಷ ನಡೆಸಲಾಗುತ್ತಿದೆ. ಇದನ್ನು ‘ಪಿಂಕ್ ಟೆಸ್ಟ್’ ಎಂದೇ ಕರೆಯಲಾಗುತ್ತದೆ.