×
Ad

ಐಪಿಎಲ್ 2024 : ಮುಂಬೈ ಇಂಡಿಯನ್ಸ್‌ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ

Update: 2023-12-15 18:14 IST

Photo: x/@hardikpandya7

ಮುಂಬೈ : 2024ರ ಐಪಿಎಲ್ ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಘೋಷಣೆ ಮಾಡಲಾಗಿದೆ.

"ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ. ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2024 ರ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ” ಎಂದು ತಂಡದ ಮುಖ್ಯಸ್ಥ ಮಹೇಲಾ ಜಯವರ್ಧನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವರ್ಷದ ನವೆಂಬರ್‌ನಲ್ಲಿ ಗುಜರಾತ್ ಟೈಟಾನ್ಸ್‌ನಿಂದ ಟ್ರೇಡ್ ಆಗಿದ್ದ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾ ಬದಲಿಗೆ ತಂಡವನ್ನು ಮುನ್ನಡೆಸಲಿದ್ದಾರೆ. 2015 ರಿಂದ ಐಪಿಎಲ್ ಗೆ ಪಾದಾರ್ಪಣೆ ಮಾಡಿದ್ದ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ರಿಕಿ ಪಾಂಟಿಂಗ್ ಅವರಿಂದ ಅವರಿಂದ ಐಪಿಎಲ್ ಕ್ಯಾಪ್ ಪಡೆದಿದ್ದ ಅವರು ಆ ಬಳಿಕ ಕ್ರಿಕೆಟ್ ಪಯಣದಲ್ಲಿ ಬಹುದೂರು ಸಾಗಿದ್ದಾರೆ.

“ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಅವರ ಅಧಿಕಾರಾವಧಿಯು ಅಸಾಧಾರಣವಾದದ್ದಲ್ಲ ”, ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News