×
Ad

IPL | ಕೆಕೆಆರ್-ಆರ್ ಆರ್ ಕೊನೆಯ ಲೀಗ್ ಪಂದ್ಯ ಮಳೆಗಾಹುತಿ

Update: 2024-05-19 23:10 IST

Image Source : BCCI/IPL

ಗುವಾಹಟಿ : ಭಾರೀ ಮಳೆಯಿಂದಾಗಿ ಆತಿಥೇಯ ರಾಜಸ್ಥಾನ ರಾಯಲ್ಸ್ ಹಾಗೂ ಅಂಕಪಟ್ಟಿಯ ಅಗ್ರಸ್ಥಾನಿ ಕೋಲ್ಕತಾ ನೈಟ್ ರೈಡರ್ಸ್ ನಡುವೆ ರವಿವಾರ ನಡೆಯಬೇಕಾಗಿದ್ದ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಕೊನೆಯ ಲೀಗ್ ಪಂದ್ಯ ರದ್ದಾಗಿದೆ.

ಈ ಫಲಿತಾಂಶದಿಂದಾಗಿ ಕೆಕೆಆರ್ ಹಾಗೂ ರಾಜಸ್ಥಾನ ತಲಾ ಒಂದು ಅಂಕ ಹಂಚಿಕೊಂಡಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೆಕೆಆರ್ ಮೇ 21ರಂದು ನಡೆಯುವ ಮೊದಲ ಕ್ವಾಲಿಫೈಯರ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿದರೆ, ರಾಜಸ್ಥಾನ ರಾಯಲ್ಸ್ ತಂಡ ಮೇ 22ರಂದು ನಡೆಯುವ ಎಲಿಮಿನೇಟರ್ ಸುತ್ತಿನಲ್ಲಿ ಆರ್ಸಿಬಿ ತಂಡವನ್ನು ಎದುರಿಸಲಿದೆ.

14 ಪಂದ್ಯಗಳಲ್ಲಿ 20 ಅಂಕ ಗಳಿಸಿರುವ ಕೆಕೆಆರ್ ಪ್ಲೇ ಆಫ್ಗೆ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ಸತತ 4 ಪಂದ್ಯಗಳಲ್ಲಿ ಸೋತು ಹಿನ್ನಡೆ ಕಂಡಿತ್ತು. ಅಂಕಪಟ್ಟಿಯಲ್ಲಿ 2ನೇ ಸ್ಥಾನ ಕಳೆದುಕೊಂಡಿರುವ ರಾಜಸ್ಥಾನ 14 ಪಂದ್ಯಗಳಲ್ಲಿ 17 ಅಂಕ ಗಳಿಸಿದೆ. ಸದ್ಯ ಉತ್ತಮ ರನ್ರೇಟ್ನೊಂದಿಗೆ ಸನ್ರೈಸರ್ಸ್ 2ನೇ ಸ್ಥಾನಕ್ಕೇರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News