IPL 2025 | ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್ ವಿಳಂಬ
Update: 2025-05-17 21:53 IST
PC | X@IPL
ಬೆಂಗಳೂರು : ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.
ಭಾರತ-ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನತೆ ನೆಲೆಸಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸ್ಥಗಿತಗೊಂಡಿದ್ದ 2025ರ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯು ಇಂದಿನಿಂದ ಆರಂಭವಾಗಬೇಕಿತ್ತು. ಆದರೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಳಂಬವಾಗಿದೆ.
ರಾತ್ರಿ 7 ಗಂಟೆಗೆ ನಡೆಯಬೇಕಿದ್ದ ಟಾಸ್ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಳಂಬವಾಗಿದೆ.