×
Ad

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸಜೆ: ಸಂದೀಪ್ ಲಮಿಚಾನೆ ರನ್ನು ಅಮಾನತುಗೊಳಿಸಿದ ನೇಪಾಳ ಕ್ರಿಕೆಟ್ ಸಂಸ್ಥೆ

Update: 2024-01-11 23:18 IST

ಸಂದೀಪ್ ಲಮಿಛಾನೆ | Photo:  @CricCrazyJohns

ಹೊಸದಿಲ್ಲಿ: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಲ್ಲಿ ಕಠ್ಮಂಡು ಜಿಲ್ಲಾ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆಯ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ನೇಪಾಳದ ಸ್ಪಿನ್ನರ್ ಸಂದೀಪ್ ಲಮಿಚಾನೆಯವರನ್ನು ನೇಪಾಳ ಕ್ರಿಕೆಟ್ ಸಂಸ್ಥೆಯು(ಸಿಎಎನ್) ಅಮಾನತುಗೊಳಿಸಿದೆ.

ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿರುವ ಸಿಎಎನ್, ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ, ಶಿಕ್ಷೆಗೆ ಗುರಿಯಾಗಿರುವ ಸಂದೀಪ್ ಲಮಿಚಾನೆಯವರನ್ನು ಎಲ್ಲ ರೀತಿಯ ದೇಶೀಯ ಹಾಗೂ ಅಂತರ್ರಾಷ್ಟ್ರೀಯ ಕ್ರಿಕೆಟ್ ನಿಂದ ಅಮಾನತುಗೊಳಿಸಿದ್ದೇವೆ ಎಂದು ನಿಮಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಹೇಳಿದೆ.

ಕಠ್ಮಂಡು ಜಿಲ್ಲಾ ನ್ಯಾಯಾಲಯವು 23ರ ಹರೆಯದ ಕ್ರಿಕೆಟಿಗ ಸಂದೀಪ್ ಗೆ 8 ವರ್ಷಗಳ ಜೈಲು ಶಿಕ್ಷೆಯಲ್ಲದೆ, 3 ಲಕ್ಷ ರೂ. ದಂಡವನ್ನು ವಿಧಿಸಿದೆ. ಸಂತ್ರಸ್ತೆಗೆ 2 ಲಕ್ಷ ರೂ. ಪರಿಹಾರವನ್ನು ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಕ್ರಿಕೆಟಿಗ ಸಂದೀಪ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಉದ್ದೇಶಿಸಿದ್ದಾರೆ ಎಂದು ಸಂದೀಪ್ ಪರ ವಕೀಲ ಸರೋಜ್ ಹೇಳಿದ್ದಾರೆ.

ಸೀಮಿತ ಓವರ್ ಕ್ರಿಕೆಟ್‌ ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದ ಸಂದೀಪ್ ನೇಪಾಳದ ಪರ 103 ಪಂದ್ಯಗಳಲ್ಲಿ 100 ವಿಕೆಟ್‌ ಗಳನ್ನು ಉರುಳಿಸಿದ್ದರು. 2018ರಿಂದ 2020ರ ತನಕ ಐಪಿಎಲ್‌ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪ್ರತಿನಿಧಿಸಿದ್ದು ಸಂದೀಪ್ 9 ಪಂದ್ಯಗಳಲ್ಲಿ ಒಟ್ಟು 13 ವಿಕೆಟ್‌ ಗಳನ್ನು ಪಡೆದಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News