ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ ಜೋಸ್ ಬಟ್ಲರ್
ಜೋಶ್ ಬಟ್ಲರ್ | Photo Credit : Jos Buttler\Facebook
ಎಜ್‌ಬಾಸ್ಟನ್, ಜು.14: ವಿಕೆಟ್‌ಕೀಪರ್-ಬ್ಯಾಟರ್ ಜೋಶ್ ಬಟ್ಲರ್ 200 ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯಗಳನ್ನಾಡಿದ ಇಂಗ್ಲೆಂಡ್‌ನ ಎರಡನೇ ಕ್ರಿಕೆಟಿಗ ಎನಿಸಿಕೊಳ್ಳುವ ಮೂಲಕ ತಮ್ಮ ಯಶಸ್ವಿ ಅಂತರ್‌ರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ.
ಅನುಭವಿ ಆಟಗಾರ ಬಟ್ಲರ್ ಭಾರತ ತಂಡದ ವಿರುದ್ಧ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ಮಂಗಳವಾರ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದ ವೇಳೆ ಈ ಮೈಲಿಗಲ್ಲು ತಲುಪಿದರು. ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮೊರ್ಗನ್ ಮಾತ್ರ ತನ್ನ ವೃತ್ತಿಜೀವನದಲ್ಲಿ 225 ಏಕದಿನ ಪಂದ್ಯಗಳನ್ನು ಆಡಿದ್ದರು. ಏಕದಿನ ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯಂತ ಹೆಚ್ಚು ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ.
ಬಟ್ಲರ್ 2012ರ ಫೆ.21ರಂದು ದುಬೈನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ತನ್ನ ಚೊಚ್ವಲ ಏಕದಿನ ಪಂದ್ಯವನ್ನಾಡಿದ್ದರು. ಆ ನಂತರ ಇಂಗ್ಲೆಂಡ್‌ನ ಓರ್ವ ಶ್ರೇಷ್ಠ ಆಟಗಾರನಾಗಿ ಪ್ರಸಿದ್ದಿ ಪಡೆದಿದ್ದಾರೆ. ಹಿಂದಿನ 13 ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಸೀಮಿತ ಓವರ್ ಕ್ರಿಕೆಟ್ ಪಂದ್ಯದಲ್ಲಿ ಮಹತ್ವದ ಸಾಧನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದರಲ್ಲಿ 2019ರ ಏಕದಿನ ವಿಶ್ವಕಪ್ ವಿಜಯವೂ ಸೇರಿದೆ.
34ರ ವಯಸ್ಸಿನ ಬಟ್ಲರ್ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವವನ್ನೂ ವಹಿಸಿದ್ದರು. ನಂತರ ಹ್ಯಾರಿ ಬ್ರೂಕ್‌ಗೆ ನಾಯಕತ್ವವಹಿಸಿಕೊಟ್ಟಿದ್ದರು.
ಏಳು ತಿಂಗಳ ನಂತರ ವಿರಾಟ್ ಕೊಹ್ಲಿ: ವಿರಾಟ್ ಕೊಹ್ಲಿ ಅವರು ಸುಮಾರು ಏಳು ತಿಂಗಳ ನಂತರ ಅಂತರ್‌ರಾಷ್ಟ್ರೀಯ ಕ್ರಿಕೆಟಿಗೆ ವಾಪಸಾಗಿದ್ದಾರೆ. ಕಾಲು ನೋವಿನಿಂದಾಗಿ ಅಫ್ಘಾನಿಸ್ತಾನ ತಂಡದ ವಿರುದ್ಧ ಸ್ವದೇಶದಲ್ಲಿ ನಡೆದಿದ್ದ ಏಕದಿನ ಸರಣಿಯಿಂದ ವಂಚಿತರಾಗಿದ್ದರು. ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಮೂವರು ಪ್ರಮುಖ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ, ಪ್ರಸಿದ್ಧ ಕೃಷ್ಣ ಹಾಗೂ ಗುರ್ನೂರ್ ಬ್ರಾರ್ ಅವರನ್ನು ಕಣಕ್ಕಿಳಿಸಿದೆ. ಶಿವಂ ದುಬೆ ಎರಡು ವರ್ಷಗಳ ನಂತರ ತನ್ನ ಮೊದಲ ಏಕದಿನ ಪಂದ್ಯವನ್ನಾಡಿದರು.