×
Ad

ಟಿ20 ವಿಶ್ವಕಪ್‌: ಭಾರತ ತಂಡ ಪ್ರಕಟ

Update: 2024-04-30 16:12 IST

ರೋಹಿತ್‌ ಶರ್ಮಾ (PTI)

ಹೊಸದಿಲ್ಲಿ: ಟಿ20 ವಿಶ್ವಕಪ್‌ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್‌ ಸ್ಥಾನ ಪಡೆದಿದ್ದಾರೆ. ಪ್ರಿಲಿಮಿನರಿ ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ. 

ಕನ್ನಡಿಗ ಕೆಎಲ್‌ ರಾಹುಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. 

ಐಪಿಎಲ್‌ 2024ರಲ್ಲಿ ಸಂಜು ಸ್ಯಾಮ್ಸನ್‌ ಅದ್ಭುತ ನಿರ್ವಹಣೆ ತೋರುವ ಮೂಲಕ 2ನೇ ವಿಕೆಟ್‌ ಕೀಪರ್‌ ಸ್ಥಾನಕ್ಕಾಗಿ ಕೆ.ಎಲ್‌. ರಾಹುಲ್‌ ಮತ್ತು ಜಿತೇಶ್‌ ಶರ್ಮ ಅವರನ್ನು ಹಿಂದಿಕ್ಕಿದ್ದಾರೆ.

ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News