×
Ad

ಕೊಹ್ಲಿ ಅರ್ಧಶತಕ: ಗಾಯಗೊಂಡು ನಿವೃತ್ತಿಯಾದ ಆದ ಶುಬ್ ಮನ್ ಗಿಲ್

Update: 2023-11-15 16:38 IST

Photo:X/BCCI

ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಭಾರತ ತಂಡ ರೋಹಿತ್ ಸ್ಟೋಟಕ ಆಟ ಹಾಗೂ ಗಿಲ್ - ಕೊಹ್ಲಿ ಅರ್ಧಶತಕದ ನೆರವಿನಿಂದ ಭರ್ಜರಿ ಆರಂಭ ಪಡೆದುಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಇಳಿದಿದ್ದ ಭಾರತ ತಂಡ ರೋಹಿತ್ ಶರ್ಮಾ ಹಾಗೂ ಶುಬ್ ಮನ್ ಗಿಲ್ ಸ್ಟೋಟಕ ಆಟದ ನೆರವಿನಿಂದ ಉತ್ತಮ ಆರಂಭ ಪಡೆದುಕೊಂಡಿತು. ನಾಯಕ ರೋಹಿತ್ 47 ರನ್ ಗಳಿಸಿ ಸೌಥಿ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರೆ , ಗಿಲ್ 79 ರನ್ ಗಳಿಸಿರುವಾಗ ಗಾಯಗೊಂಡು ನಿವೃತ್ತಿಯಾದ ರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ವಿರಾಟ್ ಕೊಹ್ಲಿ 80 ರನ್ ಹಾಗೂ ಅವರಿಗೆ ಸಾಥ್ ನೀಡಿದ್ದ ಶ್ರೇಯಸ್ ಐಯ್ಯರ್ 39 ರನ್ ಗಳಿಸಿ ಬ್ಯಾಟಿಂಗ್ ಮುಂದುವರಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News