×
Ad

ಆಸ್ಟ್ರೇಲಿಯಾ ವಿರುದ್ಧ ಭಾರತದ ʼವಿರಾಟʼ ರೂಪ | ಶತಕ ಬಾರಿಸಿದ ಕೊಹ್ಲಿ

Update: 2024-11-24 15:10 IST

Photo :x/@BCCI

ಪರ್ತ್‌: ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಪ್ರಥಮ ಪಂದ್ಯದ ಮೂರನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದಾರೆ. ಇದು ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅವರ 81 ಶತಕ..

ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ 30ನೇ ಶತಕ ಬಾರಿಸಿದರು. ಆಸ್ಟ್ರೇಲಿಯಾ ವಿರುದ್ಧ ಇದು ಅವರ 9ನೇ ಶತಕವಾಗಿದೆ. ಶತಕ ದಾಖಲಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ಗೆ ಮರಳಿದ್ದಾರೆ.

ಕೊಹ್ಲಿ ಶತಕ ದಾಖಲಿಸಿದಂತೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 487 ರನ್ ಗೆ 6 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿದೆ. ಪಂದ್ಯ ಗೆಲ್ಲಲು ಆಸ್ಟ್ರೇಲಿಯಾಕ್ಕೆ 534 ರನ್ ಗಳು ಬೇಕಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News