×
Ad

ಬಾಕ್ಸಿಂಗ್ ಡೇ ಟೆಸ್ಟ್ | ಚೊಚ್ಚಲ ಟೆಸ್ಟ್ ಶತಕ ದಾಖಲಿಸಿದ ನಿತೀಶ್ ಕುಮಾರ್ ರೆಡ್ಡಿ

Update: 2024-12-28 11:54 IST

ನಿತೀಶ್ ಕುಮಾರ್ ರೆಡ್ಡಿ (Photo:X/BCCI)

ಮೆಲ್ಬರ್ನ್: ಇಲ್ಲಿನ ಎಂಸಿಜಿ ಸ್ಟೇಡಿಯಮ್ ನಲ್ಲಿ ಆಸ್ಟ್ರೇಲಿಯ ವಿರುದ್ಧ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಭಾರತದ ಉದಯೋನ್ಮುಖ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ ಚೊಚ್ಚಲ ಶತಕ ದಾಖಲಿಸಿದ್ದಾರೆ. ಬೌಂಡರಿ ಮೂಲಕ ಅವರು ಶತಕ ಪೂರೈಸಿದರು.

8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ನಿತೀಶ್ ಕುಮಾರ್ ರೆಡ್ಡಿ, ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಕುಸಿಯುವ ಭೀತಿಯಲ್ಲಿದ್ದ ಭಾರತ ತಂಡಕ್ಕೆ ಆಸರೆಯಾದರು.

171 ಎಸೆತ ಎದುರಿಸಿದ ನಿತೀಶ್ 10 ಬೌಂಡರಿ, 1 ಸಿಕ್ಸರ್ ಸಹಿತ ರಕ್ಷಣಾತ್ಮಕ ಆಟವಾಡಿ ತಮ್ಮ ಚೊಚ್ಚಲ ಶತಕ ದಾಖಲಿಸಿದರು.

ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್ ನ ಮೂರನೇ ದಿನದ ಆಟದಲ್ಲಿ 114.3 ಓವರ್ ಗಳಲ್ಲಿ 354 ರನ್ ಗೆ 9 ವಿಕೆಟ್ ಕಳೆದುಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News