ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ ರಾಜೀವ್ ಮೆಹ್ತಾ
Photo Credit : newindianexpress
ಹೊಸದಿಲ್ಲಿ, ನ.23: ಫೆನ್ಸಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ (ಎಫ್ಎಐ) ಕಾರ್ಯದರ್ಶಿ ರಾಜೀವ್ ಮೆಹ್ತಾ ಅವರು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ (ಐಒಎ) ಅಧ್ಯಕ್ಷ ಹುದ್ದೆಗೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಎರಡನೇ ದಿನವಾದ ಸೋಮವಾರವೂ ಪ್ರಕ್ರಿಯೆ ಮುಂದುವರಿದಿದ್ದು, ಮೊದಲ ದಿನವಾದ ರವಿವಾರ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿರಲಿಲ್ಲ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಆರ್ಚರಿ ಅಸೋಸಿಯೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ವೀರೇಂದರ್ ಸಚ್ದೇವ್, ಹಾಲಿ ಐಒಎ ಉಪಾಧ್ಯಕ್ಷ ಗಗನ್ ನಾರಂಗ್ ಹಾಗೂ ನಿರ್ಗಮನ ಅಧ್ಯಕ್ಷೆ ಪಿ.ಟಿ. ಉಷಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವ ನಿರೀಕ್ಷೆಯಿದೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಸಂಜೆ 4.30ಕ್ಕೆ ಮುಕ್ತಾಯವಾಗಲಿದ್ದು, ಕರಡು ನಾಮಪತ್ರಗಳ ಪಟ್ಟಿಯನ್ನು ಅದೇ ದಿನ ಪ್ರಕಟಿಸುವ ನಿರೀಕ್ಷೆಯಿದೆ. ಪರಿಶೀಲನೆ ಹಾಗೂ ಆಕ್ಷೇಪಣೆಗಳ ಬಳಿಕ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.