×
Ad

436 ದಿನಗಳ ಬಳಿಕ ತಂಡಕ್ಕೆ ಮರಳಿದ ಮುಹಮ್ಮದ್ ಶಮಿ

Update: 2025-01-28 23:19 IST

ಮುಹಮ್ಮದ್ ಶಮಿ | PC : PTI

ಹೊಸದಿಲ್ಲಿ: ವೇಗದ ಬೌಲರ್ ಮುಹಮ್ಮದ್ ಶಮಿ ಸುದೀರ್ಘ ಅವಧಿಯ ವಿರಾಮದ ಬಳಿಕ ಭಾರತೀಯ ಕ್ರಿಕೆಟ್ ತಂಡಕ್ಕೆ ಮಂಗಳವಾರ ಮರಳಿದ್ದಾರೆ.

ರಾಜ್‌ಕೋಟ್‌ನಲ್ಲಿ ಮಂಗಳವಾರ ನಡೆದ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಆಡುವ ಭಾರತೀಯ ಹನ್ನೊಂದರ ಬಳಗಕ್ಕೆ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಅವರಿಗೆ ಜಾಗ ಮಾಡಿ ಕೊಡುವುದಕ್ಕಾಗಿ ಇನ್ನೋರ್ವ ವೇಗಿ ಅರ್ಶದೀಪ್ ಸಿಂಗ್‌ರನ್ನು ತಂಡದಿಂದ ಕೈಬಿಡಲಾಗಿದೆ.

ಶಮಿ ಭಾರತದ ಪರವಾಗಿ ಕೊನೆಯದಾಗಿ ಆಡಿದ್ದು ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್‌ನಲ್ಲಿ ಆಸ್ಟ್ರೇಲಿಯದ ವಿರುದ್ಧ. ಅವರು ಆ ಪಂದ್ಯದ ವೇಳೆ ಹಿಮ್ಮಡಿ ಗಾಯಕ್ಕೆ ಒಳಗಾದರು. ಅದಕ್ಕಾಗಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಅವರು ದೇಶಿ ಕ್ರಿಕೆಟ್‌ನಲ್ಲಿ ಆಡಿ ತನ್ನ ಸಾಮರ್ಥ್ಯವನ್ನು ನಿರೂಪಿಸಿದರು. ಈಗ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗಿದ್ದ ಬಳಿಕ, ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಆಡಲು ತಂಡಕ್ಕೆ ಮರಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News