×
Ad

ಮುಬಾರಕ್ ಹೋ ಲಾಲಾ: ಮುಹಮ್ಮದ್ ಶಮಿಗೆ ವಿರಾಟ್ ಕೊಹ್ಲಿ ಅಭಿನಂದನೆ

Update: 2024-01-09 21:45 IST

ವಿರಾಟ್ ಕೊಹ್ಲಿ, ಮುಹಮ್ಮದ್ ಶಮಿ | Photo: PTI 

ಹೊಸದಿಲ್ಲಿ: 2023ನೇ ಸಾಲಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದನ್ನು ಗುರುತಿಸಿ ವೇಗದ ಬೌಲರ್ ಮುಹಮ್ಮದ್ ಶಮಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ನೀಡಲಾಗಿದ್ದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಶಮಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿದ ವೀಡಿಯೊವನ್ನು ಶಮಿ ಸ್ವತಃ ಹಂಚಿಕೊಂಡಿದ್ದರು. ಈ ವೀಡಿಯೊಗೆ ಪ್ರತಿಕ್ರಿಯಿಸಿರುವ ಕೊಹ್ಲಿ, ಮುಬಾರಕ್ ಹೋ ಲಾಲಾ ಎಂದು ಹೇಳಿದ್ದಾರೆ.

ಕಾಲು ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಶಮಿ ಭಾರೀ ಚಪ್ಪಾಳೆಯೊಂದಿಗೆ ಅರ್ಜುನ ಪ್ರಶಸ್ತಿ ಗೌರವವನ್ನು ಸ್ವೀಕರಿಸಿದರು. ಶಮಿ ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ಮುರಿಯುವ ಜೊತೆಗೆ 24 ವಿಕೆಟ್‌ ಗಳನ್ನು ಕಬಳಿಸಿದ್ದಾರೆ.

Full View

Photo : Instagram/@mdshami.11

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News