×
Ad

IPL 2026 |ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಭಾರೀ ದಂಡ; ಕಾರಣವೇನು?

Update: 2026-05-21 16:14 IST

 ಹಾರ್ದಿಕ್ ಪಾಂಡ್ಯ | Photo Credit : PTI 

ಕೋಲ್ಕತ್ತಾ: ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆದ ಪಂದ್ಯದ ವೇಳೆ ಐಪಿಎಲ್ ನೀತಿಯ ಸಂಹಿತೆಯ ಒಂದನೇ ಹಂತವನ್ನು ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಭಾರಿ ದಂಡ ವಿಧಿಸಲಾಗಿದೆ.

ನಿನ್ನೆ ನಡೆದ ಪಂದ್ಯದ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇನಿಂಗ್ಸ್ ನ 10ನೇ ಓವರ್ ಬೌಲ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ತಮ್ಮ ರನ್ ಅಪ್ ಗೆ ಮರಳುವಾಗ ಬೇಕಂತಲೇ ವಿಕೆಟ್ ನ ಬೇಲ್ ಗಳನ್ನು ಕೆಡವಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅವರಿಗೆ ದಂಡ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ ಅವರಿಗೆ ಪಂದ್ಯದ ಶುಲ್ಕದ ಶೇ. 10ರಷ್ಟು ದಂಡ ಮತ್ತು ಒಂದು ಹಿಂಬಡ್ತಿ ಅಂಕವನ್ನು ನೀಡಲಾಗಿದೆ. ಈ ಘಟನೆಯಲ್ಲಿ ಅವರು ಐಪಿಎಲ್ ನೀತಿ ಸಂಹಿತೆಯ ವಿಧಿ 2.2 ಅನ್ನು ಉಲ್ಲಂಘಿಸಿರುವುದು ದೃಢಪಟ್ಟಿದೆ. ಈ ವಿಧಿಯು ಪಂದ್ಯದ ವೇಳೆ ಕ್ರಿಕೆಟ್ ಸಲಕರಣೆಗಳು ಅಥವಾ ಬಟ್ಟೆ, ಮೈದಾನದ ಉಪಕರಣಗಳು ಮತ್ತು ಅಳವಡಿಕೆಗಳ ದುರುಪಯೋಗಕ್ಕೆ ಸಂಬಂಧಿಸಿದೆ.

ಇದಕ್ಕೂ ಮುನ್ನ, ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಜಯಭೇರಿ ಬಾರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ತನ್ನ ಪ್ಲೇ ಆಫ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. 13 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಲೀಗ್ ಹಂತದಲ್ಲೇ ಹೊರ ಬಿದ್ದಿದ್ದು, ತನ್ನ ಕೊನೆಯ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಆಡಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News