×
Ad

ಐಪಿಎಲ್ ಟೂರ್ನಿಯಿಂದ ಮುಂಬೈ ಇಂಡಿಯನ್ಸ್ ತಂಡ ಔಟ್!

Update: 2024-05-09 10:21 IST

Photo:X

ಹೊಸದಿಲ್ಲಿ: ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸದೆಬಡಿದ ಹಿನ್ನೆಲೆಯಲ್ಲಿ ಮಾಜಿ ಚಾಂಪಿಯನ್ ತಂಡ ಮುಂಬೈ ಇಂಡಿಯನ್ಸ್ ಟೂರ್ನಿಯಿಂದ ಹೊರಬಿದ್ದಿದೆ!

ಕೇವಲ 9.4 ಓವರ್ಗಳನ್ನು SRH ಗೆಲುವು ಸಾಧಿಸಿದ ಪರಿಣಾಮ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಹಾದಿ ಮುಚ್ಚಿದೆ.

ಮುಂಬೈ ಇಂಡಿಯನ್ಸ್ 12 ಪಂದ್ಯಗಳಿಂದ 8 ಅಂಕ ಪಡೆದಿದ್ದು, ಲೀಗ್ ಹಂತದ ಇನ್ನು ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ, ತಂಡದ ಒಟ್ಟು ಅಂಕ 12 ಮಾತ್ರ ಆಗಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ ರಾಯಲ್ಸ್ ಹಾಗೂ ಸನ್ರೈಸರ್ಸ್ ಬುಟ್ಟಿಯಲ್ಲಿ ಸಾಕಷ್ಟು ಅಂಕಗಳಿದ್ದು, ಮೇ 14ರಂದು ನಡೆಯುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಒಂದು ತಂಡವಂತೂ 14 ಅಂಕ ಗಳಿಸುವುದು ಖಚಿತ.

ಆದ್ದರಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇ ಆಫ್ ತಲುಪುವ ಯಾವುದೇ ಅವಕಾಶ ಇರುವುದಿಲ್ಲ. ಈ ಫಲಿತಾಂಶದೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಸ್ಪರ್ಧೆಯಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News