×
Ad

ಕೊಹ್ಲಿಯೊಂದಿಗಿನ ನನ್ನ ಸಂಬಂಧ ವೈಯಕ್ತಿಕವಾದುದು: ಗೌತಮ್ ಗಂಭೀರ್

Update: 2024-07-22 12:41 IST

Photo : PTI

ಮುಂಬೈ : ರನ್ ಮೆಷಿನ್ ವಿರಾಟ್ ಕೊಹ್ಲಿ ಹಾಗೂ ತಮ್ಮ ನಡುವಿನ ಸಂಬಂಧದ ಕುರಿತು ಕೇಳಿ ಬರುತ್ತಿರುವ ವದಂತಿಗಳ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಭಾರತದ ತಂಡದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್, "ನನ್ನ ಮತ್ತು ಕೊಹ್ಲಿ ನಡುವಿನ ಸಂಬಂಧ ನಮ್ಮಿಬ್ಬರಿಗೆ ಸೇರಿದ್ದೇ ಹೊರತು, ಟಿಆರ್‌ಪಿಗಾಗಿಯಲ್ಲ. ಮುಂದಿನ ದಿನಗಳಲ್ಲಿ ನಾವಿಬ್ಬರೂ ಒಂದೇ ಪುಟದಲ್ಲಿರುತ್ತೇವೆ" ಎಂದು ಘೋಷಿಸಿದ್ದಾರೆ.

ಐಪಿಎಲ್ ಕ್ರೀಡಾಕೂಟದಲ್ಲಿ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಹಲವು ಬಾರಿ ಮಾತಿನ ಚಕಮಕಿ ನಡೆದಿರುವುದರಿಂದ, ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧ ಅಷ್ಟು ಸರಿಯಿಲ್ಲ ಎಂದೇ ಹೇಳಲಾಗುತ್ತಿದೆ. ಆದರೆ, ಈ ಇಬ್ಬರು ಜುಲೈ 27ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಪ್ರವಾಸದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ.

ಜುಲೈ 27ರಿಂದ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವು, ಶ್ರೀಲಂಕಾ ತಂಡದೆದುರು ಮೂರು ಏಕದಿನ ಪಂದ್ಯ ಹಾಗೂ ಅಷ್ಟೇ ಸಂಖ್ಯೆಯ ಟಿ-20 ಪಂದ್ಯಗಳನ್ನಾಡಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News