ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಮೆರವಣಿಗೆ ಇಲ್ಲ
Photo credit: PTI
ಬೆಂಗಳೂರು: ಚೊಚ್ಚಲ ಐಪಿಎಲ್ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಬೆಂಗಳೂರಿಗೆ ಆಗಮಿಸಲಿದ್ದು, ನಿಗದಿಪಡಿಸಿದಂತೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ನಡೆಯಬೇಕಿದ್ದ ವಿಜಯೋತ್ಸವ ಮೆರವಣಿಗೆ (ವಿಕ್ಟರಿ ಪರೇಡ್) ಇರುವುದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಗೃಹ ಸಚಿವ ಡಾ.ಪರಮೇಶ್ವರ್ ತಿಳಿಸಿದ್ದಾರೆ.
"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ" ಎಂದು ಬೆಂಗಳೂರು ಸಂಚಾರ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 4, 2025