ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ಗಿಲ್
ಶುಭಮನ್ ಗಿಲ್ | Photo Credit : PTI
ಹೊಸದಿಲ್ಲಿ, ಅ. 7: ಏಕದಿನ ರ್ಯಾಂ ಕಿಂಗ್ ನಲ್ಲೂ ಮಹತ್ವದ ಬದಲಾವಣೆಯಾಗಿದ್ದು, ಭಾರತದ ಶುಭಮನ್ ಗಿಲ್ ಬ್ಯಾಟಿಂಗ್ ಪಟ್ಟಿಯಲ್ಲಿ ತಮ್ಮ ಅಗ್ರ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಗುವಾಹಟಿಯಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದ ವೇಳೆ ಗಿಲ್ ಔಟಾಗದೆ 223 ರನ್ ಗಳಿಸಿದ್ದರು. ಈ ಮೂಲಕ ಭಾರತವು ಸರಣಿ ಗೆಲ್ಲಲು ನೆರವಾಗಿದ್ದರು. ಗಿಲ್ 841 ರೇಟಿಂಗ್ ಪಾಯಿಂಟ್ಸ್ ಪಡೆದಿದ್ದಾರೆ.
ಸರಣಿಯ ಕೊನೆಯ ಪಂದ್ಯದಲ್ಲಿ 162 ರನ್ ಗಳಿಸಿದ್ದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಎರಡು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನ ತಲುಪಿದ್ದಾರೆ. ಭಾರತದ ಬ್ಯಾಟರ್ ಕೆ. ಎಲ್. ರಾಹುಲ್ ಏಳು ಸ್ಥಾನ ಮೇಲಕ್ಕೇರಿ 10ನೇ ಸ್ಥಾನ ಹಂಚಿಕೊಂಡಿದ್ದಾರೆ.
ವೆಸ್ಟ್ಇಂಡೀಸ್ನ ಎಡಗೈ ಬ್ಯಾಟರ್ ಆಮಿರ್ ಜಾಂಗೂ ಪಟ್ಟಿಯಲ್ಲಿ ಭಾರೀ ಜಿಗಿತ ಕಂಡಿದ್ದು, ಟಾಪ್-100ರಿಂದ 55ನೇ ಸ್ಥಾನಕ್ಕೆ ಏರಿದ್ದಾರೆ.
ಏಕದಿನ ತಂಡದ ಬೌಲರ್ ಗಳ ಪೈಕಿ ವೆಸ್ಟ್ಇಂಡೀಸ್ನ ವೇಗಿ ಜೇಡನ್ ಸೀಲ್ಸ್ 12 ಸ್ಥಾನ ಭಡ್ತಿ ಪಡೆದು 10ನೇ ಸ್ಥಾನಕ್ಕೇರಿದ್ದಾರೆ. ಭಾರತ ತಂಡದ ವಿರುದ್ಧದ ಸರಣಿಯಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದಿದ್ದ ಸೀಲ್ಸ್ ರ್ಯಾಂ ಕಿಂಗ್ ನಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.