×
Ad

ಪ್ಯಾರಿಸ್ ಒಲಿಂಪಿಕ್ಸ್‌ | ಬ್ಯಾಡ್ಮಿಂಟನ್ ನಲ್ಲಿ ರೋಚಕ ಜಯದೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಲಕ್ಷ್ಯ ಸೇನ್

Update: 2024-08-02 23:01 IST

 ಲಕ್ಷ್ಯ ಸೇನ್ | PC : Olympics.com 

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಶುಕ್ರವಾರ ಚೈನೀಸ್ ತೈಪೆಯ ಚೌ ಟಿಯೆನ್ ಚೆನ್ ವಿರುದ್ಧ ರೋಚಕ ಮೂರು ಗೇಮ್‌ಗಳ ಜಯದೊಂದಿಗೆ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.

ಆ ಮೂಲಕ ಒಲಿಂಪಿಕ್ಸ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಷಟ್ಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಲಕ್ಷ್ಯ ಸೇನ್ ಅವರ ಚೊಚ್ಚಲ ಒಲಿಂಪಿಕ್ ಪದಕಕ್ಕೆ ಇನ್ನು ಒಂದು ಹೆಜ್ಜೆ ಬಾಕಿಯಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದ ಹಾಲಿ ಚಾಂಪಿಯನ್ ಸೇನ್ ಅವರು 2021ರ ವಿಶ್ವ ಚಾಂಪಿಯನ್ ಸಿಂಗಾಪುರದ ಲೋಹ್ ಕೀನ್ ಯೂ ಮತ್ತು ಒಲಿಂಪಿಕ್ ಚಾಂಪಿಯನ್ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸೆನ್ ನಡುವಿನ ಪಂದ್ಯದ ವಿಜೇತರನ್ನು ಮುಂದಿನ ಪಂದ್ಯದಲ್ಲಿ ಎದುರಿಸಲಿದ್ದಾರೆ.

ಮಹಿಳಾ ಸಿಂಗಲ್ಸ್ ಆಟಗಾರ್ತಿ ಪಿವಿ ಸಿಂಧು ಮತ್ತು ಸೈನಾ ನೆಹ್ವಾಲ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ಫೈನಲ್ ಹಂತವನ್ನು ದಾಟಿದ ಏಕೈಕ ಭಾರತೀಯರಾಗಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಪರುಪಳ್ಳಿ ಕಶ್ಯಪ್ ಮತ್ತು ಕಿಡಂಬಿ ಶ್ರೀಕಾಂತ್ ಕ್ರಮವಾಗಿ 2012ರ ಲಂಡನ್ ಮತ್ತು 2016ರ ರಿಯೊ ಒಲಿಂಪಿಕ್ಸ್ ನಲ್ಲಿ ಕ್ವಾರ್ಟರ್‌ಫೈನಲ್ ತಲುಪಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News