ಪೀಟರ್ ಹ್ಯಾಂಡ್ಸ್‌ಕಾಂಬ್ | Photo Credit : X

ಸಿಡ್ನಿ: ಮುಂಬರುವ ಭಾರತ ಪ್ರವಾಸಕ್ಕಾಗಿ ಆಸ್ಟ್ರೇಲಿಯ ’ಎ’ ತಂಡಕ್ಕೆ ಪೀಟರ್ ಹ್ಯಾಂಡ್ಸ್‌ಕಾಂಬ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ಅವರಿಗೆ ಆಸ್ಟ್ರೇಲಿಯ ಟೆಸ್ಟ್ ತಂಡಕ್ಕೆ ಮರಳಲು ಮತ್ತೊಂದು ಅವಕಾಶ ಸಿಕ್ಕಿದೆ.

35 ವರ್ಷದ ಬ್ಯಾಟರ್ ಹ್ಯಾಂಡ್ಸ್‌ಕಾಂಬ್ ನಾಲ್ಕು ದಿನಗಳ ಪಂದ್ಯದ ತಂಡದಲ್ಲಿ ಅತ್ಯಂತ ಅನುಭವಿ ಆಟಗಾರನಾಗಿದ್ದಾರೆ. ಆಸ್ಟ್ರೇಲಿಯದ ಮುಂದಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮುನ್ನ ಅಂತರರಾಷ್ಟ್ರೀಯ ತಂಡಕ್ಕೆ ಮರಳುವ ನಿಟ್ಟಿನಲ್ಲಿ ತನ್ನ ಸಾಮರ್ಥ್ಯ ಸಾಬೀತುಪಡಿಸಲು ಅವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

2023ರ ಬಾರ್ಡರ್-ಗವಾಸ್ಕರ್ ಟ್ರೋಫಿ ಪ್ರವಾಸದಲ್ಲಿ ಎಲ್ಲಾ ನಾಲ್ಕು ಟೆಸ್ಟ್‌ಗಳಲ್ಲಿ ಆಡಿದ ಬಳಿಕ, ಹ್ಯಾಂಡ್ಸ್‌ಕಾಂಬ್ ಯಾವುದೇ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿಲ್ಲ ಅಥವಾ ಆಸ್ಟ್ರೇಲಿಯ ’ಎ’ ತಂಡದಲ್ಲೂ ಸ್ಥಾನ ಪಡೆದಿಲ್ಲ. ಮುಂಬರುವ ತಿಂಗಳುಗಳಲ್ಲಿ ಆಸ್ಟ್ರೇಲಿಯ ಮತ್ತೊಮ್ಮೆ ಭಾರತ ಪ್ರವಾಸಕ್ಕೆ ಬರುತ್ತಿರುವುದರಿಂದ, ಈ ಹಿರಿಯ ಆಟಗಾರ ಟೆಸ್ಟ್ ತಂಡದಲ್ಲಿ ಮತ್ತೆ ಸ್ಥಾನ ಪಡೆಯುವಲ್ಲಿ ಈ ಪ್ರವಾಸ ಮಹತ್ವದ ಪಾತ್ರ ವಹಿಸಬಹುದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor