×
Ad

ಟಿ20 ವಿಶ್ವಕಪ್‌ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

Update: 2024-06-30 01:08 IST

Photo : x/@narendramodi

ಹೊಸದಿಲ್ಲಿ: ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ, "ಚಾಂಪಿಯನ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ" ಎಂದು ಪೋಸ್ಟ್ ಮಾಡಿದ್ದಾರೆ.

ಜೊತೆಗೆ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸುವ ವೀಡಿಯೊ ಸಂದೇಶದಲ್ಲಿ ಪ್ರಧಾನಿ ಮೋದಿ, ಭಾರತ ತಂಡವು ವಿಶ್ವಕಪ್ ಗೆದ್ದಿದೆ. ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನು ಗೆದ್ದಿದೆ. ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಅಜೇಯ ಸಾಧನೆ ಮಾಡಿರುವುದು ಸಣ್ಣ ಸಾಧನೆಯಲ್ಲ ಎಂದು ಹೇಳಿದ್ದಾರೆ.

"ಈ ಅದ್ಭುತ ಗೆಲುವಿಗಾಗಿ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಇಂದು, 140 ಕೋಟಿ ಭಾರತೀಯರು ನಿಮ್ಮ ಅದ್ಭುತ ಪ್ರದರ್ಶನದ ಬಗ್ಗೆ ಹೆಮ್ಮೆಪಡುತ್ತಾರೆ. ನೀವು ವಿಶ್ವಕಪ್ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನು ಗೆದ್ದಿದ್ದೀರಿ. ನಿಮ್ಮ ಈ ಅದ್ಭುತ ಗೆಲುವಿಗೆ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ”ಎಂದು ಪ್ರಧಾನಿ ತಮ್ಮ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಐಸಿಸಿ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ನೇತೃತ್ವದ ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದಿತು. 2011 ರ ವಿಶ್ವಕಪ್ ಬಳಿಕ ಇದು ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News