×
Ad

ಪಾಟ್ನಾ ವಿಮಾನ ನಿಲ್ದಾಣದಲ್ಲಿ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ

Update: 2025-05-30 21:38 IST

PC : PTI 

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ 14 ವರ್ಷದ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಹಾಗೂ ಅವರ ಕುಟುಂಬ ಸದಸ್ಯರನ್ನು ಭೇಟಿಯಾದರು. ಐಪಿಎಲ್ ಹಾಲಿ ಋತುವಿನಲ್ಲಿ ವೈಭವ್‌ ರ ಶ್ರೇಷ್ಠ ನಿರ್ವಹಣೆಯನ್ನು ಪ್ರಧಾನಿ ಈ ಸಂದರ್ಭದಲ್ಲಿ ಕೊಂಡಾಡಿದರು.

ವೈಭವ್ ಸೂರ್ಯವಂಶಿಯೊಂದಿಗಿನ ಭೇಟಿಯ ಚಿತ್ರಗಳನ್ನು ಪ್ರಧಾನಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡರು. ಅವರು ಹದಿಹರೆಯದ ಕ್ರಿಕೆಟಿಗನ ಶಾಂತಚಿತ್ತತೆ ಮತ್ತು ಸ್ಫೋಟಕ ಬ್ಯಾಟಿಂಗ್‌ನ್ನು ಶ್ಲಾಘಿಸಿದರು. ‘‘ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿಯಾದೆ. ಅವರ ಕ್ರಿಕೆಟ್ ನೈಪುಣ್ಯವನ್ನು ದೇಶಾದ್ಯಂತ ಶ್ಲಾಘಿಸಲಾಗುತ್ತಿದೆ. ಅವರ ಭವ್ಯ ಭವಿಷ್ಯಕ್ಕೆ ನಾನು ಶುಭ ಹಾರೈಸುತ್ತೇನೆ’’ ಎಂಬುದಾಗಿ ಪ್ರಧಾನಿ ಬರೆದಿದ್ದಾರೆ.

ಐಪಿಎಲ್ 2025ರಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಆಡುತ್ತಿರುವ ಸೂರ್ಯವಂಶಿ 7 ಪಂದ್ಯಗಳಲ್ಲಿ 252 ರನ್‌ಗಳನ್ನು ಗಳಿಸಿದ್ದಾರೆ. ಅವರು ಗುಜರಾತ್ ಟೈಟಾನ್ಸ್ ವಿರುದ್ಧ 38 ಎಸೆತಗಳಲ್ಲಿ 101 ರನ್‌ಗಳನ್ನು ಸಿಡಿಸಿದ್ದಾರೆ. ಆ ಮೂಲಕ ಪುರುಷರ ಟಿ20 ಪಂದ್ಯಗಳಲ್ಲಿ ಶತಕ ಬಾರಿಸಿದ ಅತಿ ಕಿರಿಯ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಅದೂ ಅಲ್ಲದೆ, ಐಪಿಎಲ್‌ ನಲ್ಲಿ 2ನೇ ಅತಿ ವೇಗದ ಶತಕ ಗಳಿಕೆದಾರ ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ. ಅವರು 35 ಎಸೆತಗಳಲ್ಲಿ 100 ರನ್ ಸಿಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News