×
Ad

POCSO ಪ್ರಕರಣ| ರಾಷ್ಟ್ರೀಯ ಪ್ಯಾರಾ ಆರ್ಚರಿ ಕೋಚ್ ಕುಲದೀಪ್‌ಗೆ 5 ವರ್ಷ ಜೈಲು ಶಿಕ್ಷೆ

Update: 2026-05-22 20:41 IST

ಕುಲದೀಪ್ ವೇದ್ವಾನ್‌ |Photo Credit : @TheKhelIndia

ಚಂಡಿಗಡ, ಮೇ 22: ಅಪ್ರಾಪ್ತ ಕ್ರೀಡಾಪಟುವಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ 2023ರಲ್ಲಿ ಬಂಧಿಸಲ್ಪಟ್ಟು, ನಂತರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ಗೆ ಮುಂಚಿತವಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ರಾಷ್ಟ್ರೀಯ ಪ್ಯಾರಾ ಆರ್ಚರಿ ಕೋಚ್ ಕುಲದೀಪ್ ವೇದ್ವಾನ್‌ಗೆ ಸೋನಿಪತ್‌ನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ)ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕುಲದೀಪ್ ವೇದ್ವಾನ್ ಅವರನ್ನು ದೋಷಿ ಎಂದು ಘೋಷಿಸಲಾಯಿತು. 15,000 ರೂ. ದಂಡ ವಿಧಿಸಲಾಯಿತು.

ಮೇ 15ರಂದು ನ್ಯಾಯಾಲಯವು ಕುಲದೀಪ್‌ರನ್ನು ತಪ್ಪಿತಸ್ಥರೆಂದು ಘೋಷಿಸಿ, ಬುಧವಾರ ಶಿಕ್ಷೆಯನ್ನು ಪ್ರಕಟಿಸಿದೆ. ನಂತರ ಅವರನ್ನು ವಶಕ್ಕೆ ಪಡೆಯಲಾಗಿದೆ.

ಪೋಕ್ಸೊ ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಕುಲದೀಪ್‌ಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಸೆಕ್ಷನ್ 12ರ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯವು ವಿಧಿಸಿತು. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತದೆ.

2023ರ ಎಪ್ರಿಲ್‌ನಲ್ಲಿ ಈ ಪ್ರಕರಣ ನಡೆದಿದ್ದು, ಸೋನಿಪತ್‌ನ ಭಾರತೀಯ ಕ್ರೀಡಾ ಪ್ರಾಧಿಕಾರ ಕೇಂದ್ರದಲ್ಲಿ ನಡೆದ ಯುವ ಚಾಂಪಿಯನ್‌ಶಿಪ್ ಟ್ರಯಲ್ಸ್ ಸಮಯದಲ್ಲಿ ವೇದ್ವಾನ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅಪ್ತಾಪ್ತೆ ಬಿಲ್ಲುಗಾರ್ತಿ ಆರೋಪಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News