×
Ad

ಪ್ಯಾರಿಸ್‌ ಒಲಿಂಪಿಕ್ಸ್: ಬಾಕ್ಸಿಂಗ್ ನಲ್ಲಿ ಪ್ರೀ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ ಭಾರತದ ಪ್ರೀತಿ ಪವಾರ್

Update: 2024-07-28 13:03 IST

Photo credit: AP

ಪ್ಯಾರಿಸ್‌: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ರಾತ್ರಿ ನಡೆದ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಭಾರತದ ಬಾಕ್ಸರ್ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ.

ಹರ್ಯಾಣದ 20 ವರ್ಷದ ಬಾಕ್ಸರ್ ಪ್ರೀತಿ ಅವರು ವಿಯೆಟ್ನಾಂನ ವೋ ಥಿ ಕಿಮ್ ಅನ್ಹ್ ವಿರುದ್ಧ 5–0 ಅಂತರದ ಸುಲಭ ಗೆಲುವು ಸಾಧಿಸಿದ್ದಾರೆ.

ಮಂಗಳವಾರ ನಡೆಯುವ 16ನೇ ಸುತ್ತಿನ ಪಂದ್ಯದಲ್ಲಿ ಪ್ರೀತಿ ಕೊಲಂಬಿಯಾದ ಮಾರ್ಕೆಲಾ ಯೆನಿ ವಿರುದ್ಧ ಹೋರಾಟ ನಡೆಸಲಿದ್ದಾರೆ.

"ಕ್ರೀಡಾಕೂಟಕ್ಕೂ ಮುನ್ನ ಅನಾರೋಗ್ಯಕ್ಕೀಡಾಗಿದ್ದ ಪ್ರೀತಿ ಚೇತರಿಸಿಕೊಂಡು, ಈಗ ಅಸಾಧಾರಣ ಧೈರ್ಯ ಪ್ರದರ್ಶಿಸಿದರು. ಅಭಿಯಾನವನ್ನು ಜಯದೊಂದಿಗೆ ಆರಂಭಿಸಿರುವುದು ಸಂತಸ ತಂದಿದೆ" ಎಂದು ಬಾಕ್ಸಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾದ ಅಧ್ಯಕ್ಷ ಅಜಯ್‌ ಸಿಂಗ್‌ ಹೇಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News