IPL 2025 | ಮುಂಬೈ ವಿರುದ್ಧ ಪಂಜಾಬ್ ಗೆ ಗೆಲುವಿನ ʼಶ್ರೇಯಸ್ಸುʼ
Update: 2025-06-02 01:51 IST
Photo credit: X/@IPL
ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಮುಂಬೈ ನೀಡಿದ್ದ 204 ರನ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್, ನಾಯಕ ಶ್ರೇಯಸ್ ಅಯ್ಯರ್ (87) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ ಗುರಿ ತಲುಪಿತು. ಈ ಮೂಲಕ 2014 ರ ನಂತರ ಎರಡನೇ ಬಾರಿಗೆ ಐಪಿಎಲ್ ಫೈನಲ್ಗೇರಿದೆ.
ಜೂ.3 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ.