×
Ad

ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

Update: 2023-11-29 14:40 IST

 ರಾಹುಲ್ ದ್ರಾವಿಡ್ - Photo- PTI

ಹೊಸದಿಲ್ಲಿ: ವದಂತಿಗಳಿಗೆ ಅಂತ್ಯ ಹಾಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಹಾಗೂ ಅವರ ನೆರವು ಸಿಬ್ಬಂದಿಗಳ ಗುತ್ತಿಗೆ ಅವಧಿಯನ್ನು ವಿಸ್ತರಿಸಿದೆ.

“ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಪುರುಷ ಕ್ರಿಕೆಟ್ ವಿಶ್ವಕಪ್ 2023ರ ನಂತರ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದ ರಾಹುಲ್ ದ್ರಾವಿಡ್ ಅವರೊಂದಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಫಲಪ್ರದ ಚರ್ಚೆ ನಡೆಸಿತು ಹಾಗೂ ಅವರ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ಸರ್ವಾನುಮತದಿಂದ ಸಮ್ಮತಿಸಿತು” ಎಂದು ಬುಧವಾರ ಬಿಡುಗಡೆ ಮಾಡಲಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪ್ರಕಟಣೆಯಲ್ಲಿ ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News