ನವಿ ಮುಂಬೈ, ರಾಯ್ಪುರದಲ್ಲಿ ಆರ್‌ಸಿಬಿಯ ಐಪಿಎಲ್ ಪಂದ್ಯಗಳು?
Update: 2026-01-13 22:20 IST
ಸಾಂದರ್ಭಿಕ ಚಿತ್ರ | Photo Credit : @IPL
ಮುಂಬೈ, ಜ.3: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 2026ರ ಋತುವಿನ ಐಪಿಎಲ್ ಟೂರ್ನಿಯಲ್ಲಿ ತನ್ನ ತವರು ಪಂದ್ಯಗಳನ್ನು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣ ಹಾಗೂ ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಇದೇ ವೇಳೆ, ರಾಜಸ್ಥಾನ ರಾಯಲ್ಸ್ ತಂಡವು ತನ್ನ ಪಂದ್ಯಗಳನ್ನು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಡಲಿದೆ.
ಆರ್‌ಸಿಬಿ ತಂಡವು 2026ರ ಐಪಿಎಲ್ ಟೂರ್ನಿಯಲ್ಲಿ ನವಿ ಮುಂಬೈನಲ್ಲಿ ಐದು ಪಂದ್ಯಗಳು ಹಾಗೂ ರಾಯ್ಪುರದಲ್ಲಿ ಎರಡು ಪಂದ್ಯಗಳನ್ನು ಆಡಲಿದೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ ನಂತರ ಈ ವ್ಯವಸ್ಥೆಯನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.