×
Ad

ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

Update: 2025-06-04 20:46 IST

PC: PTI 

ಹೊಸದಿಲ್ಲಿ: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದೆ. “ಈ ದುರಂತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ” ಎಂದು ಪ್ರಧಾನಿ ಮೋದಿ ಅವರು ಪೋಸ್ಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News