IPL 2024: ಕೊಹ್ಲಿ ಅರ್ಧ ಶತಕ, ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್: RCBಗೆ ರೋಚಕ ಜಯ

Update: 2024-03-25 18:16 GMT

Photo:X/@IPL

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ನ ಆರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ 4 ವಿಕೆಟ್ ಗಳಿಂದ ರೋಚಕ ಗೆಲುವು ಸಾಧಿಸಿದೆ.

ಪಂಜಾಬ್ ಕಿಂಗ್ಸ್ ನೀಡಿದ್ದ 177 ರನ್ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕ (73) ಬಾರಿಸಿದರೆ, ದಿನೇಶ್ ಕಾರ್ತಿಕ್ ಸ್ಫೋಟಕ ಅಜೇಯ 28 ನೆರವಿನಿಂದ ಗೆಲುವಿನ ನಗೆ ಬೀರಿತು.  ಮಹಿಪಾಲ್ ಲೊಮ್ರೋರ್ ಕೂಡ 8 ಎಸೆತಗಳಲ್ಲಿ ಅಜೇಯ 17 ರನ್ ಬಾರಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

ಪಂಜಾಬ್ ಪರ ಕಗಿಸೊ ರಬಾಡ ಮತ್ತು ಹರ್ಪ್ರೀತ್‌ ಬ್ರಾರ್‌ ತಲಾ 2 ವಿಕೆಟ್‌ ಪಡೆದರು.

ಈ ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್ ಕಿಂಗ್ಸ್ ತಂಡ ನಾಯಕ ಶಿಖರ್‌ ಧವನ್‌ ರ 45 ಹಾಗೂ ಶಶಾಂಕ್‌ ಸಿಂಗ್‌ ಅವರ ಸ್ಫೋಟಕ 21 ರನ್‌ ಗಳ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 176 ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತ್ತು. ಆರ್‌ಸಿಬಿ ಪರ ಮುಹಮ್ಮದ್ ಸಿರಾಜ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ತಲಾ 2 ವಿಕೆಟ್ ಪಡೆದು ಮಿಂಚಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News