×
Ad

ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡ ಪ್ರಕಟ: ಟಿ20ಗೆ ಮರಳಿದ ರೋಹಿತ್, ಕೊಹ್ಲಿ

Update: 2024-01-07 21:23 IST

Rohit Sharma and Virat Kohli | Photo: X

ಮುಂಬೈ: ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿಗೆ ರವಿವಾರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ಸ್ಥಾನ ನೀಡಲಾಗಿದೆ. ಜನವರಿ 11 ರಂದು ಮೊಹಾಲಿಯಲ್ಲಿ ಪ್ರಾರಂಭವಾಗುವ ಸರಣಿಗೆ ರೋಹಿತ್‌ ವಿರಾಟ್‌ ಪುನರಾಗಮನ ಮಾಡಲಿದ್ದಾರೆ.

ನವೆಂಬರ್ 2022 ರಲ್ಲಿ ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್‌ನಲ್ಲಿ ರೋಹಿತ್ ಮತ್ತು ಕೊಹ್ಲಿ ಕೊನೆಯ ಬಾರಿಗೆ ಟಿ 20 ಯಲ್ಲಿ ಕಾಣಿಸಿಕೊಂಡಿದ್ದರು. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಅಫ್ಘಾನಿಸ್ತಾನ ಸರಣಿಗೆ ರೋಹಿತ್ – ವಿರಾಟ್ ಆಯ್ಕೆ ಬಯಸಿತ್ತು ಎಂದು ಪಿಟಿಐ ಕಳೆದ ವಾರ ವರದಿ ಮಾಡಿತ್ತು. ಐಪಿಎಲ್ ನಂತರ ನಡೆಯಲಿರುವ ವಿಶ್ವಕಪ್‌ಗೂ ಮುನ್ನ ಅಫ್ಘಾನಿಸ್ತಾನ ಸರಣಿ ಭಾರತದ ಕೊನೆಯ ಟಿ20 ಸರಣಿಯಾಗಿದೆ.

ಅಫ್ಘಾನಿಸ್ತಾನ ವಿರುದ್ಧದ 3 ಟಿ20 ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News