×
Ad

ರೋಹಿತ್, ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಇನಿಂಗ್ಸ್ ಆರಂಭಿಸಬೇಕು: ಸೌರವ್ ಗಂಗುಲಿ

Update: 2024-04-23 22:24 IST

ರೋಹಿತ್ ಶರ್ಮಾ ,  ವಿರಾಟ್ ಕೊಹ್ಲಿ ,  ಸೌರವ್ ಗಂಗುಲಿ

ಹೊಸದಿಲ್ಲಿ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೂನ್‌ನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಇನಿಂಗ್ಸ್ ಆರಂಭಿಸಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಸಲಹೆ ನೀಡಿದ್ದಾರೆ.

ಈ ಇಬ್ಬರು ಆಟಗಾರರು ವಿಶ್ವಕಪ್ ಆಡಲು ವೆಸ್ಟ್‌ಇಂಡೀಸ್‌ಗೆ ತೆರಳಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಆಯ್ಕೆ ಸಮಿತಿ ಹೀಗೆಯೇ ಮಾಡಬೇಕು ಎಂದು ನಾನು ಹೇಳುವುದಿಲ್ಲ. ಅಂತಿಮವಾಗಿ ಇದು ಅವರ ನಿರ್ಧಾರವಾಗಿದೆ. ನನ್ನ ಪ್ರಕಾರ ರೋಹಿತ್ ಹಾಗೂ ವಿರಾಟ್ ಇನಿಂಗ್ಸ್ ಆರಂಭಿಸುವುದು ಉತ್ತಮ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿರುವ ಗಂಗುಲಿ ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐನ ಆಯ್ಕೆ ಸಮಿತಿಯು ಮೇ 1ರ ಅಂತಿಮ ಗಡುವಿನ ಮೊದಲು ಈ ವಾರಾಂತ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ತಾತ್ಕಾಲಿಕ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.

ಗಂಗುಲಿ ಅವರು ಬಿಸಿಸಿಐ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರಾಹುಲ್ ದ್ರಾವಿಡ್‌ರನ್ನು ಮುಖ್ಯ ಕೋಚ್‌ರನ್ನಾಗಿ ನೇಮಿಸಲಾಗಿತ್ತು. ರೋಹಿತ್ ಶರ್ಮಾ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಾಯಕನಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News