×
Ad

ಸಚಿನ್ ತೆಂಡುಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ

Update: 2025-01-31 21:07 IST

ಸಚಿನ್ ತೆಂಡುಲ್ಕರ್‌ | PC : PTI 

ಹೊಸದಿಲ್ಲಿ: ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್‌ಗೆ ಮುಂಬೈನಲ್ಲಿ ಶನಿವಾರ ನಡೆಯಲಿರುವ ನಮನ್ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಬಿಸಿಸಿಐ ಗೌರವಿಸಲಾಗುತ್ತಿದೆ.

ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್‌ಗೆ ಭಾರತೀಯ ಕ್ರಿಕೆಟಿಗೆ ನೀಡಿದ ಕೊಡುಗೆಗಾಗಿ ವಿಶೇಷ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ.

51ರ ಹರೆಯದ ತೆಂಡುಲ್ಕರ್ ಕ್ರಿಕೆಟ್ ಇತಿಹಾಸದಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರನಾಗಿದ್ದಾರೆ. ತೆಂಡುಲ್ಕರ್ ಭಾರತ ಕ್ರಿಕೆಟ್ ತಂಡದ ಪರ 664 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನು ಆಡಿ 34 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. 2011ರಲ್ಲಿ ಭಾರತದ 50 ಓವರ್ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ತೆಂಡುಲ್ಕರ್ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ಭಾರತ ರತ್ನವನ್ನು ಸ್ವೀಕರಿಸಿದ್ದಾರೆ.

ಕ್ರಿಕೆಟ್ ಚರಿತ್ರೆಯಲ್ಲಿ ಅತ್ಯಂತ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನಾಗಿರುವ ತೆಂಡುಲ್ಕರ್ ತನ್ನ ವೃತ್ತಿಜೀವನದಲ್ಲಿ 200 ಟೆಸ್ಟ್ ಪಂದ್ಯಗಳು ಹಾಗೂ 463 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 18,426 ಏಕದಿನ ರನ್ ಹಾಗೂ 15,921 ಟೆಸ್ಟ್ ರನ್‌ಗಳನ್ನು ಕಲೆ ಹಾಕಿದ್ದರು. ತನ್ನ ವೃತ್ತಿಜೀವನದಲ್ಲಿ ಕೇವಲ ಒಂದು ಟಿ-20 ಅಂತರ್‌ರಾಷ್ಟ್ರೀಯ ಪಂದ್ಯ ಆಡಿದ್ದರು.

ಪ್ರತಿಷ್ಠಿತ ಸಿ.ಕೆ.ನಾಯ್ಡು ಪ್ರಶಸ್ತಿಯನ್ನು 2023ರಲ್ಲಿ ಲೆಜೆಂಡರಿ ವಿಕೆಟ್‌ಕೀಪರ್ ಫಾರೂಕ್ ಇಂಜಿನಿಯರ್ ಹಾಗೂ ಭಾರತದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿಗೆ ನೀಡಲಾಗಿದೆ.

ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾ ಶ್ರೇಷ್ಠ ಪುರುಷ ಅಂತರ್‌ರಾಷ್ಟ್ರೀಯ ಕ್ರಿಕೆಟಗನಿಗೆ ನೀಡುವ ಪಾಲಿ ಉಮ್ರಿಗರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸ್ಮತಿ ಮಂಧಾನ ಶ್ರೇಷ್ಠ ಮಹಿಳೆಯರ ಅಂತರ್‌ರಾಷ್ಟ್ರೀಯ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಲಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News