×
Ad

ಶುಭಮನ್ ಗಿಲ್‌ ಭಾರತದ ನೂತನ ಟೆಸ್ಟ್‌ ನಾಯಕ

Update: 2025-05-24 14:14 IST

ಹೊಸದಿಲ್ಲಿ: ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮ, ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಿಗೇ, ಮುಂಬರುವ ಇಂಗ್ಲೆಂಡ್ ಎದುರಿನ ಟೆಸ್ಟ್ ಕ್ರಿಕೆಟ್ ಸರಣಿಗೆ ಭರವಸೆಯ ಬ್ಯಾಟರ್ ಶುಭಮನ್ ಗಿಲ್ ಅವರನ್ನು ನಾಯಕರನ್ನಾಗಿ ಬಿಸಿಸಿಐ ಪ್ರಕಟಿಸಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ 18 ಮಂದಿ ಆಟಗಾರರ ಟೆಸ್ಟ್ ತಂಡವೂ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಕೌಂಟಿಯಲ್ಲಿ ಆಡಿದ ಅನುಭವವಿರುವ ಕರುಣ್ ನಾಯರ್ ಎಂಟು ವರ್ಷಗಳ ಬಳಿಕ ರಾಷ್ಡ್ರೀಯ ತಂಡಕ್ಕೆ ಮರಳಿದ್ದು, ಅದಕ್ಕೂ ಮುನ್ನ ಅವರು ಭಾರತ ಎ ತಂಡದ ಪರವಾಗಿ ಇಂಗ್ಲೆಂಡ್‌ಗೆ ತೆರಳಲಿದ್ದಾರೆ. ಉಳಿದಂತೆ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೆ.ಎಲ್.ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ.

ಆದರೆ, ಭಾರತದ ಭರವಸೆಯ ಮಧ್ಯಮ ವೇಗಿ ಮುಹಮ್ಮದ್ ಶಮಿಯನ್ನು ತಂಡದಿಂದ ಕೈಬಿಡಲಾಗಿದೆ. ಮುಹಮ್ಮದ್ ಶಮಿಯ ಕೆಲಸದ ಹೊರೆ ನಿರ್ವಹಣೆಯೇ ಪ್ರಮುಖ ಕಾರಣ ಎಂದು ಭಾರತ ತಂಡದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ.

ತಂಡ

ಶುಭಮನ್‌ ಗಿಲ್‌ (ನಾಯಕ), ರಿಷಭ್‌ ಪಂತ್‌ (ಉಪ ನಾಯಕ), ಯಶಸ್ವಿ ಜೈಸ್ವಾಲ್‌, ಕೆ.ಎಲ್‌. ರಾಹುಲ್‌, ಕರುಣ್‌ ನಾಯರ್‌, ಸಾಯಿ ಸುದರ್ಶನ್‌, ಅಭಿಮನ್ಯು ಈಶ್ವರನ್‌, ನಿತೇಶ್‌ ಕುಮಾರ್‌ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್‌ ಜುರೆಲ್‌ (ವಿ.ಕೀ), ವಾಷಿಂಗ್ಟನ್‌ ಸುಂದರ್‌, ಶಾರ್ದೂಲ್‌ ಠಾಕೂರ್‌, ಜಸ್ಪ್ರೀತ್‌ ಬುಮ್ರಾ, ಮುಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ, ಆಕಾಶ್‌ ದೀಪ್‌, ಅರ್ಶದೀಪ್‌ ಸಿಂಗ್‌ ಮತ್ತು ಕುಲದೀಪ್‌ ಯಾದವ್

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News