Photo credit : icc

ದೋಹಾ: ಭಾರತ 'ಎ' ತಂಡದ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು 'ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್' ಕ್ರಿಕೆಟ್ ಟೂರ್ನಿಯಲ್ಲಿ ಯುಎಇ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ 'ಲಿಸ್ಟ್ ಎ' ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕೇವಲ 28 ಎಸೆತಗಳಲ್ಲಿ ಶತಕ ಹಾಗೂ 52 ಎಸೆತಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ದೋಹಾದಲ್ಲಿ ನಡೆದ ಪಂದ್ಯದಲ್ಲಿ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದರು. 2023ರಲ್ಲಿ ಟ್ಯಾಸ್ಮೆನಿಯಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್ಗುರ್ಕ್ 29 ಎಸೆತಗಳಲ್ಲಿ ಶತಕ ಗಳಿಸಿದ್ದು ಈ ಹಿಂದಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಸೂರ್ಯವಂಶಿ ಹಿಂದಿಕ್ಕಿದರು.

ಕೇವಲ 40 ಎಸೆತಗಳಲ್ಲಿ 150 ರನ್ ಪೂರೈಸಿದ ಅವರು, ದಾಖಲೆಗಳು 'ಲಿಸ್ಟ್ ಎ' ಪಂದ್ಯಗಳ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 150 ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

12ನೇ ಓವರ್ ನಲ್ಲಿ ಸತತ ನಾಲ್ಕು ಸಿಕ್ಸರ್ಗಳನ್ನು ಸಿಡಿಸಿದ ಸೂರ್ಯವಂಶಿ, ತಮ್ಮ ಇನ್ನಿಂಗ್ಸ್ನ 24ನೇ ಸಿಕ್ಸರ್ ದಾಖಲಿಸಿದರು. 'ಲಿಸ್ಟ್ ಎ' ಕ್ರಿಕೆಟ್ನ ಒಂದೇ ಇನ್ನಿಂಗ್ಸ್ ನಲ್ಲಿ ಬ್ಯಾಟರ್ ಒಬ್ಬರು ಬಾರಿಸಿದ ಗರಿಷ್ಠ ಸಿಕ್ಸರ್ ಗಳ ದಾಖಲೆಯನ್ನೂ ತಮ್ಮದಾಗಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor