×
Ad

ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್ | 2ನೇ ಸ್ಥಾನ ಉಳಿಸಿಕೊಂಡ ಸೂರ್ಯಕುಮಾರ್

Update: 2024-07-10 21:41 IST

ಸೂರ್ಯಕುಮಾರ್ | PC : PTI 

ಹೊಸದಿಲ್ಲಿ : ಐಸಿಸಿ ಹೊಸ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್ 2ನೇ ಸ್ಥಾನ ಉಳಿಸಿಕೊಂಡಿದ್ದಾರೆ.

821 ಪಾಯಿಂಟ್ಸ್ ಪಡೆದಿರುವ ಸೂರ್ಯ ಆಸ್ಟ್ರೇಲಿಯದ ಟ್ರಾವಿಸ್ ಹೆಡ್(844)ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಫಿಲ್ ಸಾಲ್ಟ್(797), ಪಾಕಿಸ್ತಾನದ ನಾಯಕ ಬಾಬರ್ ಆಝಮ್(755), ಮುಹಮ್ಮದ್ ರಿಝ್ವಾನ್(746)ಹಾಗೂ ಜೋಸ್ ಬಟ್ಲರ್(716) ಆ ಬಳಿಕದ ಸ್ಥಾನದಲ್ಲಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಋತುರಾಜ್ ಗಾಯಕ್ವಾಡ್ 13 ಸ್ಥಾನ ಮೇಲಕ್ಕೇರಿ 7ನೇ ಸ್ಥಾನ ತಲುಪಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News