ಸ್ಮೃತಿ ಮಂಧಾನ | Photo Credit : PTI 

ನಗೋಯ: ಬಾಂಗ್ಲಾದೇಶ ವಿರುದ್ಧ ನಡೆದ ಏಶ್ಯನ್ ಗೇಮ್ಸ್‌ನ ಮಹಿಳೆಯರ ಕ್ರಿಕೆಟ್ ಸೆಮಿ ಫೈನಲ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಮೈಲಿಗಲ್ಲು ತಲುಪಿದ್ದು, ಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 100 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಭಾರತದ ಆರಂಭಿಕ ಆಟಗಾರ್ತಿ ಮಂಧಾನ ರವಿವಾರ ನಡೆದಿದ್ದ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿದರು. ಈ ಪಂದ್ಯದಲ್ಲಿ ಜಯ ಸಾಧಿಸಿದ ಭಾರತವು ಚಿನ್ನದ ಪದಕದ ಸುತ್ತಿಗೇರಿದೆ.

ಮಂಧಾನ ಕೇವಲ 19 ಎಸೆತಗಳಲ್ಲಿ 37 ರನ್ ಗಳಿಸಿದರು. ನಹಿದಾ ಅಖ್ತರ್‌ಗೆ ವಿಕೆಟ್ ಒಪ್ಪಿಸುವ ಮೊದಲು ಐದು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳನ್ನು ಸಿಡಿಸಿದರು. ಮಂಧಾನ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಭಾರತವು ಪವರ್‌ಪ್ಲೇನಲ್ಲಿ 1 ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿತು.

ಮಂಧಾನ ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ ತನ್ನ ಸಾಧನೆ ಮುಂದುವರಿಸಿದ್ದಾರೆ. ಇದೇ ಇನಿಂಗ್ಸ್‌ನಲ್ಲಿ ನ್ಯೂಝಿಲ್ಯಾಂಡ್‌ನ ಸುಝಿ ಬೇಟ್ಸ್ ದಾಖಲೆಯನ್ನು ಮುರಿದು ಮಹಿಳೆಯರ ಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಮಂಧಾನ ಟಿ-20 ಕ್ರಿಕೆಟ್‌ನಲ್ಲಿ 4,788 ರನ್ ಗಳಿಸಿ ಬೇಟ್ಸ್ ದಾಖಲೆ(4,758)ಮುರಿದರು. ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಸಾರ್ವಕಾಲಿಕ ಪಟ್ಟಿಯಲ್ಲಿ 4,287 ರನ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor