ಅಭಿಷೇಕ್ ಶರ್ಮಾ | Photo Credit : PTI 

ಹೊಸದಿಲ್ಲಿ, ಅ.28: ಭಾರತ ತಂಡದ ಸಹ ಆಟಗಾರ ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿದ ಅಭಿಷೇಕ್ ಶರ್ಮಾ, ICC ಟಿ-20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಮತ್ತೆ ನಂ.1 ಸ್ಥಾನವನ್ನು ವಶಪಡಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಮಾರ್ಕೊ ಜಾನ್ಸನ್ ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ್ದು, ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಟೆಸ್ಟ್ ಆಲ್ರೌಂಡರ್ಗಳ ಪಟ್ಟಿಯಲ್ಲೂ ನಂ.1 ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ದಕ್ಷಿಣ ಆಫ್ರಿಕಾ ಸುಲಭ ಗೆಲುವು ದಾಖಲಿಸಿದ ಬಳಿಕ ಜಾನ್ಸನ್ ಎರಡು ವಿಭಾಗಗಳಲ್ಲಿ ಮೇಲಕ್ಕೇರಿದ್ದಾರೆ. ಎಡಗೈ ವೇಗದ ಬೌಲರ್ ಬ್ಯಾಟಿಂಗ್ನಲ್ಲಿ 85 ರನ್ ಗಳಿಸಿದ್ದರೆ, ಆಸ್ಟ್ರೇಲಿಯಾದ ಮೊದಲ ಇನಿಂಗ್ಸ್ನಲ್ಲಿ ಐದು ವಿಕೆಟ್ ಗಳನ್ನು ಪಡೆದಿದ್ದರು.

ಈ ಪ್ರದರ್ಶನದ ಮೂಲಕ ಜಾನ್ಸನ್ ಟೆಸ್ಟ್ ರ್ಯಾಂಕಿಂಗ್ನ ಮೂರೂ ವಿಭಾಗಗಳಲ್ಲಿ ತಮ್ಮ ಸ್ಥಾನವನ್ನು ಉತ್ತಮಪಡಿಸಿಕೊಂಡರು. 26 ವರ್ಷದ ಜಾನ್ಸನ್ ಟೆಸ್ಟ್ ಬ್ಯಾಟರ್ಗಳ ಪಟ್ಟಿಯಲ್ಲಿ 13 ಸ್ಥಾನ ಮೇಲಕ್ಕೇರಿ 56ನೇ ಸ್ಥಾನ ತಲುಪಿದರು. ಬೌಲರ್ಗಳ ಪಟ್ಟಿಯಲ್ಲಿ ಐದು ಸ್ಥಾನ ಮೇಲಕ್ಕೇರಿ ಮಿಚೆಲ್ ಸ್ಟಾರ್ಕ್ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ಪಡೆದರು. ಆಲ್ರೌಂಡರ್ಗಳ ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿ ಭಾರತದ ರವೀಂದ್ರ ಜಡೇಜ ಅವರನ್ನು ಹಿಂದಿಕ್ಕಿದರು.

ಜಡೇಜ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಟೆಸ್ಟ್ ಆಲ್ರೌಂಡರ್ಗಳ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿದ್ದರು. ದಕ್ಷಿಣ ಆಫ್ರಿಕಾದ ಮಾಜಿ ದಿಗ್ಗಜ ಡೇಲ್ ಸ್ಟೇಯ್ನ್ ಇತ್ತೀಚೆಗೆ ಜಾನ್ಸನ್ ಅವರನ್ನು ‘ವಿಶ್ವಶ್ರೇಷ್ಠ ಕ್ರಿಕೆಟಿಗ’ ಎಂದು ಬಣ್ಣಿಸಿದ್ದರು. ಇದೀಗ ಜಾನ್ಸನ್ ಅಗ್ರ ರ್ಯಾಂಕ್ ತಲುಪಿದ್ದಾರೆ.

ವೆಲ್ಲಿಂಗ್ಟನ್ನಲ್ಲಿ ಮಂಗಳವಾರ ನ್ಯೂಝಿಲೆಂಡ್ ವಿರುದ್ಧ ನಡೆದ ಮೂರನೇ ಪಂದ್ಯದಲ್ಲಿ ಶತಕ ಗಳಿಸಿದ ಅಭಿಷೇಕ್, ಟಿ-20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದರು.

ಎಡಗೈ ಬ್ಯಾಟರ್ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದರು. 38 ಎಸೆತಗಳಲ್ಲಿ 113 ರನ್ ಗಳಿಸಿದ ಅವರು, ಭಾರತ ತಂಡ ಆರು ವಿಕೆಟ್ ಗಳಿಂದ ಜಯ ಸಾಧಿಸಿ ಸರಣಿ ಗೆಲ್ಲಲು ನೆರವಾದರು. ಈ ಸಾಧನೆಯೊಂದಿಗೆ ಕಿಶನ್ ಅವರನ್ನು ಹಿಂದಿಕ್ಕಿ ಟಿ-20 ಬ್ಯಾಟರ್ಗಳ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನ ಪಡೆದರು.

ಐರ್ಲೆಂಡ್ ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡಿದ ಬಳಿಕ ಈ ವರ್ಷದ ಜುಲೈನಲ್ಲಿ ಕಿಶನ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ್ದರು. ಅಭಿಷೇಕ್ 2025ರ ಜುಲೈನಲ್ಲಿ ಮೊದಲ ಬಾರಿಗೆ ನಂ.1 ಸ್ಥಾನ ಪಡೆದಿದ್ದರು. ಆಗ ಟ್ರಾವಿಸ್ ಹೆಡ್ ಅವರನ್ನು ಹಿಂದಿಕ್ಕಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ನಾಲ್ಕು ಸ್ಥಾನ ಮೇಲಕ್ಕೇರಿ ಟೆಸ್ಟ್ ಬ್ಯಾಟರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು.

ಭಾರತ ತಂಡದ ನಾಯಕ ಶುಭಮನ್ ಗಿಲ್ ಏಕದಿನ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಹಾಗೂ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor