×
Ad

ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ: ಜಯ್ ಶಾ

Update: 2024-06-30 21:41 IST

Photo : x\BCCI

ಹೊಸದಿಲ್ಲಿ : ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿರುವ ಟೀಮ್ ಇಂಡಿಯಾವನ್ನು ಶ್ಲಾಘಿಸಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಅತ್ಯುತ್ತಮ ಪ್ರದರ್ಶನದ ಮೂಲಕ ತಂಡವು ಟೀಕಾಕಾರರ ಬಾಯಿ ಮುಚ್ಚಿಸಿದೆ ಎಂದರು.

ರೋಹಿತ್ ಶರ್ಮಾ ನಾಯಕತ್ವದ ವಿಶ್ವಕಪ್ ವಿಜೇತ ತಂಡಕ್ಕೆ 125 ಕೋಟಿ ರೂ. ಬಹುಮಾನವನ್ನು ಶಾ ಪ್ರಕಟಿಸಿದ್ದಾರೆ.

ರೋಹಿತ್ ಶರ್ಮಾ ಅವರ ದಕ್ಷ ನಾಯಕತ್ವದಲ್ಲಿ ಭಾರತವು ಟೂರ್ನಮೆಂಟ್ನಲ್ಲಿ ಅಜೇಯ ದಾಖಲೆಯೊಂದಿಗೆ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ ಎಂದು ಶಾ ಹೇಳಿಕೆಯೊಂದರಲ್ಲಿ ತಿಳಿಸಿದರು.

ಐಸಿಸಿ ಟಿ20 ವಿಶ್ವಕಪ್ ಜಯಿಸಿರುವ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ ಪ್ರಕಟಿಸಲು ನನಗೆ ಸಂತೋಷವಾಗುತ್ತಿದೆ.

ಟೂರ್ನಮೆಂಟ್ನುದ್ದಕ್ಕೂ ಭಾರತವು ಅಮೋಘ ಪ್ರತಿಭೆ, ಬದ್ಧತೆ ಹಾಗೂ ಕ್ರೀಡಾಸ್ಪೂರ್ತಿಯನ್ನು ಮೆರೆದಿದೆ. ಈ ಅತ್ಯುತ್ತಮ ಪ್ರದರ್ಶನಕ್ಕೆ ಎಲ್ಲ ಆಟಗಾರರು, ಕೋಚ್ ಗಳು ಹಾಗೂ ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News