×
Ad

ಇಂಗ್ಲೆಂಡ್ ವಿರುದ್ಧದ T20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಪಾದಾರ್ಪಣೆ; ಭಾರತ ಹಿರಿಯರ ತಂಡದ ಅತಿ ಕಿರಿಯ ಆಟಗಾರ ಎಂಬ ದಾಖಲೆ

ಸಚಿನ್ ತೆಂಡುಲ್ಕರ್ ದಾಖಲೆ ಮುರಿದ ವೈಭವ್

Update: 2026-07-04 19:14 IST

 ವೈಭವ್ ಸೂರ್ಯವಂಶಿ  | Photo Credit : PTI

ಮ್ಯಾಂಚೆಸ್ಟರ್‌, ಜು. 5: ಇಂಗ್ಲೆಂಡ್ ವಿರುದ್ಧ ಶನಿವಾರ ಮ್ಯಾಂಚೆಸ್ಟರ್‌ ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಭಾರತ ಪುರುಷರ ಸೀನಿಯರ್ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು. ಇದರೊಂದಿಗೆ, ಭಾರತ ಪುರುಷರ ಸೀನಿಯರ್ ರಾಷ್ಟ್ರೀಯ ತಂಡದ ಪರವಾಗಿ ಆಡಿದ ಅತಿ ಕಿರಿಯ ಆಟಗಾರ ಎಂಬ ದಾಖಲೆಯನ್ನು ಅವರು ನಿರ್ಮಿಸಿದರು. ಸಚಿನ್ ತೆಂಡುಲ್ಕರ್ ದಾಖಲೆ ಮುರಿದರು.

15 ವರ್ಷ 99 ದಿನಗಳ ವಯಸ್ಸಿನ ವೈಭವ್ ಸೂರ್ಯವಂಶಿಗೆ ಭಾರತ ತಂಡದ ಕ್ಯಾಪ್ ಅನ್ನು ತಿಲಕ್ ವರ್ಮಾ ಪ್ರದಾನ ಮಾಡಿದರು. ಇತ್ತೀಚೆಗೆ ನಡೆದ ಭಾರತ 'ಎ' ತಂಡವನ್ನು ಒಳಗೊಂಡ ತ್ರಿಕೋನ ಸರಣಿಯಲ್ಲಿ ತಿಲಕ್ ವರ್ಮಾ ತಂಡವನ್ನು ಮುನ್ನಡೆಸಿದ್ದರು.

ಕಳೆದ ಎರಡು ಐಪಿಎಲ್ ಋತುಗಳಲ್ಲಿ ವೈಭವ್ ಸೂರ್ಯವಂಶಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅವರು ಇದುವರೆಗೆ ಐಪಿಎಲ್‌ನಲ್ಲಿ 23 ಪಂದ್ಯಗಳನ್ನು ಆಡಿದ್ದು, 44.69ರ ಸರಾಸರಿಯಲ್ಲಿ 1,028 ರನ್ ಗಳಿಸಿದ್ದಾರೆ.

ಶ್ರೀಲಂಕಾ 'ಎ' ತಂಡವನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 94 ರನ್ ಗಳಿಸಿ ಗಮನ ಸೆಳೆದಿದ್ದರು.

ಎರಡು ಪಂದ್ಯಗಳ ಐರ್ಲೆಂಡ್ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಗೂ ಸೂರ್ಯವಂಶಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ, ಆ ಸರಣಿಯ ಎರಡೂ ಪಂದ್ಯಗಳಲ್ಲಿ ಅವರಿಗೆ ಅವಕಾಶ ದೊರೆತಿರಲಿಲ್ಲ. ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರಿಗೆ ಭಾರತ ಸೀನಿಯರ್ ತಂಡದ ಪರವಾಗಿ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News