×
Ad

ವಿನೇಶ್ ಫೋಗಟ್ ಅನರ್ಹತೆ | ಐಒಎದಿಂದ ಪ್ರಬಲ ಪ್ರತಿಭಟನೆ : ಕ್ರೀಡಾ ಸಚಿವ

Update: 2024-08-07 22:10 IST

ಮನ್ಸುಖ್ ಮಾಂಡವೀಯ | PC : PTI

ಹೊಸದಿಲ್ಲಿ : ಪ್ಯಾರಿಸ್ ಒಲಿಂಪಿಕ್ಸ್ನಿಂದ ಕುಸ್ತಿಪಟು ವಿನೇಶ್ ಫೋಗಟ್ರನ್ನು ಅನರ್ಹಗೊಳಿಸಿರುವುದರ ವಿರುದ್ಧ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ (ಐಒಎ) ಬಧವಾರ ಕುಸ್ತಿಯ ಜಾಗತಿಕ ಆಡಳಿತ ಮಂಡಳಿಗೆ ಪ್ರಬಲ ಪ್ರತಿಭಟನೆಯನ್ನು ಸಲ್ಲಿಸಿದೆ ಎಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಬುಧವಾರ ತಿಳಿಸಿದರು.

‘‘ಪ್ರಧಾನಿ ನರೇಂದ್ರ ಮೋದಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ನ ಮುಖ್ಯಸ್ಥೆ ಪಿ.ಟಿ. ಉಷಾ ಜೊತೆ ಮಾತನಾಡಿ, ವಿಷಯದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ಖಾಸಗಿ ಸಿಬ್ಬಂದಿ ಸೇರಿದಂತೆ ಎಲ್ಲಾ ಸೌಲಭ್ಯವನ್ನು ಸರಕಾರವು ಫೋಗಟ್ಗೆ ನೀಡಿದೆ’’ ಎಂದು ಲೋಕಸಭೆಯಲ್ಲಿ ಹೇಳಿಕೆ ನೀಡಿದ ಸಚಿವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News