×
Ad

IPL 2026 | ಹಲವು ದಾಖಲೆಗಳನ್ನು ಬರೆದ ವಿರಾಟ್ ಕೊಹ್ಲಿ

Update: 2026-06-01 16:06 IST

ವಿರಾಟ್ ಕೊಹ್ಲಿ (Photo: X/@RCBTweets)

ಅಹಮದಾಬಾದ್: ರವಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದ ಬಳಿಕ, ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ, ಹಲವು ಮೈಲಿಗಲ್ಲುಗಳನ್ನು ನಿರ್ಮಿಸಿದರು.

ಐಪಿಎಲ್ ಪಂದ್ಯಾವಳಿಯಲ್ಲಿ ಇದುವರೆಗೆ 21 ಬಾರಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪುರಸ್ಕೃತರಾಗಿದ್ದ ರೋಹಿತ್ ಶರ್ಮರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ, 22ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದಲ್ಲದೆ, ಐಪಿಎಲ್ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವ ಭಾರತೀಯ ಆಟಗಾರರಾಗಿ ಅವರು ಹೊರಹೊಮ್ಮಿದ್ದಾರೆ. ಒಟ್ಟಾರೆ ಪಂದ್ಯಶ್ರೇಷ್ಠ ಪ್ರಶಸ್ತಿಗಳ ಪೈಕಿ ದಿಲ್ಲಿ ಆಟಗಾರರಾದ ವಿರಾಟ್ ಕೊಹ್ಲಿ, 22 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿರುವ ಕ್ರಿಸ್ ಗೇಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಎಬಿ ಡಿವಿಲಿಯರ್ಸ್ ಅವರು ಒಟ್ಟು 25 ಪಂದ್ಯಶ್ರೇಷ್ಠ ಪ್ರಶಸ್ತಿಯೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News