ವಿರಾಟ್ ಕೊಹ್ಲಿ , ಸಚಿನ್ ತೆಂಡುಲ್ಕರ್‌ | Photo Credit : PTI 

ಆಕ್ಲೆಂಡ್: ಭಾರತ ತಂಡವು ಬುಧವಾರ ಆಕ್ಲೆಂಡ್‌ನ ಈಡನ್‌ಪಾರ್ಕ್‌ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ತನ್ನ ಮೊದಲ ಏಕದಿನ ಪಂದ್ಯವನ್ನಾಡಲಿದೆ. ಇದರಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸ್ಥಾಪಿಸುವತ್ತ ಚಿತ್ತಹರಿಸಿದ್ದಾರೆ.

ಭಾರತ ತಂಡದ ಮಾಜಿ ನಾಯಕ ಕೊಹ್ಲಿ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡುಲ್ಕರ್ ಹೆಸರಲ್ಲಿರುವ ದಾಖಲೆಯನ್ನು ಮುರಿಯುವ ಹಾದಿಯಲ್ಲಿದ್ದಾರೆ.

ನ್ಯೂಝಿಲ್ಯಾಂಡ್‌ನಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಭಾರತೀಯ ಬ್ಯಾಟರ್‌ಗಳ ಪೈಕಿ ಅತ್ಯಂತ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಅವರು ನ್ಯೂಝಿಲ್ಯಾಂಡ್ ನೆಲದಲ್ಲಿ ಆಡಿರುವ 11 ಪಂದ್ಯಗಳಲ್ಲಿ 514 ರನ್ ಗಳಿಸಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಅವರಿಗೆ ಇನ್ನೂ 139 ರನ್‌ಗಳ ಅಗತ್ಯವಿದೆ.

ನ್ಯೂಝಿಲ್ಯಾಂಡ್‌ನಲ್ಲಿ ಆಡಿರುವ 18 ಏಕದಿನ ಪಂದ್ಯಗಳಲ್ಲಿ 652 ರನ್ ಗಳಿಸಿರುವ ಸಚಿನ್ ತೆಂಡುಲ್ಕರ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಒಂದು ಶತಕ(100 ಅಥವಾ ಇನಿಂಗ್ಸ್‌ನಲ್ಲಿ ಹೆಚ್ಚು ರನ್)ಹಾಗೂ ನಾಲ್ಕು ಅರ್ಧಶತಕಗಳನ್ನು(50ರಿಂದ 99 ರನ್)ಗಳಿಸಿದ್ದಾರೆ. ಔಟಾಗದೆ 163 ಗರಿಷ್ಠ ವೈಯಕ್ತಿಕ ಸ್ಕೋರಾಗಿದೆ.

ವೀರೇಂದ್ರ ಸೆಹ್ವಾಗ್ 12 ಪಂದ್ಯಗಳಲ್ಲಿ 598 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಸೆಹ್ವಾಗ್ ಮೂರು ಶತಕ ಹಾಗೂ ಎರಡು ಅರ್ಧಶತಕಗಳನ್ನು ಗಳಿಸಿದ್ದು, ಔಟಾಗದೆ 125 ಗರಿಷ್ಠ ಮೊತ್ತವಾಗಿದೆ.

11 ಪಂದ್ಯಗಳಲ್ಲಿ 514 ರನ್ ಗಳಿಸಿರುವ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಝಿಲ್ಯಾಂಡ್‌ನಲ್ಲಿ ಒಂದು ಶತಕ ಹಾಗೂ ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದು, 123 ಗರಿಷ್ಠ ಸ್ಕೋರಾಗಿದೆ.

13 ಪಂದ್ಯಗಳಲ್ಲಿ 505 ರನ್ ಗಳಿಸಿದ್ದ ಎಂ.ಎಸ್. ಧೋನಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ ಒಂದೂ ಶತಕ ಗಳಿಸಿಲ್ಲದಿದ್ದರೂ ಐದು ಅರ್ಧಶತಕಗಳನ್ನು ದಾಖಲಿಸಿದ್ದರು. ಔಟಾಗದೆ 84 ಗರಿಷ್ಠ ಸ್ಕೋರಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor