×
Ad

ಆಸ್ಟ್ರೇಲಿಯಾ ವಿರುದ್ಧ ಮತ್ತೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ; ಭಾರತಕ್ಕೆ ಆರಂಭಿಕ ಆಘಾತ

Update: 2025-10-23 10:33 IST

PC | @sportstarweb

ಅಡಿಲೇಡ್ : ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಬ್ಯಾಟಿಂಗ್ ನಲ್ಲಿ ಕುಸಿತ ಕಂಡಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಸೊನ್ನೆ ಸುತ್ತಿದ್ದು, ತಂಡಕ್ಕೆ ಆರಂಭಿಕ ಆಘಾತ ಉಂಟಾಗಿದೆ.

ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ನಾಯಕ ಮಿಚೇಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತಕ್ಕೆ ಮೊದಲ ಹಂತದಲ್ಲೇ ಹಿನ್ನಡೆ ಎದುರಾಯಿತು.

ರೋಹಿತ್ ಶರ್ಮಾ ಜೊತೆಗೆ ಇನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ ಕೇವಲ 9 ಎಸೆತಗಳಲ್ಲಿ 8 ರನ್ ಗಳಿಸಿ ಔಟಾದರು. ನಂತರ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ, ಪರ್ಥ್ ಪಂದ್ಯದಲ್ಲಿ ಖಾತೆ ತೆರೆಯದಂತೆಯೇ, ಈ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಸೇರಿದರು. ಆಸ್ಟ್ರೇಲಿಯಾದ ಯುವ ವೇಗಿ ಷೇವಿಯರ್ ಬರ್ಟ್ರೆಟ್ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಆಗಿ ಕೊಹ್ಲಿ ವಾಪಸ್ಸಾದರು.

10 ಓವರ್‌ಗಳ ಅಂತ್ಯದ ವೇಳೆಗೆ ಭಾರತ ಎರಡು ವಿಕೆಟ್ ಕಳೆದುಕೊಂಡು 29 ರನ್ ಗಳಿಸಿದೆ. ಕ್ರೀಸ್‌ನಲ್ಲಿ ರೋಹಿತ್ ಶರ್ಮಾ (43 ಎಸೆತಗಳಲ್ಲಿ 19 ರನ್) ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾ ಪರ ಷೇವಿಯರ್ ಬರ್ಟ್ರೆಟ್ ಈವರೆಗೆ ಎರಡೂ ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಭಾರತಕ್ಕೆ ದೊಡ್ಡ ಸವಾಲು ಎಸೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News