×
Ad

ಇಂಗ್ಲೆಂಡ್ ವಿರುದ್ಧ ಕೊನೆ 3 ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್!

Update: 2024-02-10 13:54 IST

ವಿರಾಟ್ ಕೊಹ್ಲಿ

ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ವೈಯಕ್ತಿಕ ಕಾರಣಗಳಿಗಾಗಿ ವಿರಾಟ್ ಕೊಹ್ಲಿ ಈ ಸಂಪೂರ್ಣ ಸರಣಿಯಿಂದ ಹೊರಗುಳಿಯಲಿದ್ದು, ಗಾಯಕ್ಕೆ ತುತ್ತಾಗಿರುವ ಶ್ರೇಯಸ್ ಅಯ್ಯರ್ ಅವರನ್ನೂ ತಂಡದಿಂದ ಕೈಬಿಡಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.

ಗಾಯದ ಸಮಸ್ಯೆಯಿಂದ ಎರಡನೆ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಆಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್.ರಾಹುಲ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆಡುವ ಹನ್ನೊಂದರ ತಂಡದಲ್ಲಿ ಸ್ಥಾನ ಪಡೆಯುವುದಕ್ಕೂ ಮುನ್ನ, ಅವರಿಬ್ಬರೂ ತಮ್ಮ ದೈಹಿಕ ಸಾಮರ್ಥ್ಯವನ್ನು ಸಾಬೀತು ಪಡಿಸಬೇಕಿದೆ. ಮತ್ತೊಂದೆಡೆ ಆರ್ಸಿಬಿ ಬೆಂಗಳೂರು ತಂಡದ ವೇಗದ ಬೌಲರ್ ಆಕಾಶ್ ದೀಪ್ ಅವರಿಗೆ ಭಾರತೀಯ ಟೆಸ್ಟ್ ತಂಡದ ಸದಸ್ಯರಾಗುವ ಚೊಚ್ಚಲ ಅವಕಾಶ ದೊರೆತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News