×
Ad

ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ವಿರಾಟ್ ಕೊಹ್ಲಿಯೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ?

Update: 2025-05-10 09:18 IST

PC | PTI

ನವದೆಹಲಿ : ಅಂತಾರಾಷ್ಟ್ರೀಯ ಟಿ20 ಬಳಿಕ ಟೆಸ್ಟ್ ಕ್ರಿಕೆಟ್‌ನಿಂದಲೂ ನಿವೃತ್ತಿಯಾಗುವುದಾಗಿ ಭಾರತದ ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಿಸಿಸಿಐಗೆ ತಿಳಿಸಿದ್ದಾರೆ ಎಂದು Indian Express ವರದಿ ಮಾಡಿದೆ. ಆದರೆ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮಂಡಳಿಯು ಕೊಹ್ಲಿಗೆ ಮನವಿ ಮಾಡಿದೆ ಎಂದು ತಿಳಿದುಬಂದಿದೆ.

ಇತ್ತೀಚಿಗಷ್ಟೇ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಕೊಹ್ಲಿ ನಿವೃತ್ತಿಯಾಗುವ ಬಗ್ಗೆ ಸುದ್ದಿ ಹೊರಬಿದ್ದಿದೆ. ಜೂನ್‌ನಲ್ಲಿ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಡದಿರಲು ಕೊಹ್ಲಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News