×
Ad

ವಿಶ್ವಕಪ್ 2023: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ

Update: 2023-10-25 14:32 IST

Image credit: X/@cricketworldcup

ಹೊಸದಿಲ್ಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ ಲ್ಯಾಂಡ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

ಆಸ್ಟ್ರೇಲಿಯಾ ಮತ್ತು ನೆದರ್ ಲ್ಯಾಂಡ್ಸ್ ತಂಡಗಳೆರಡೂ ಈವರೆಗೆ ತಲಾ ನಾಲ್ಕು ಪಂದ್ಯಗಳನ್ನಾಡಿದ್ದು, ಈ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಆಸ್ಟ್ರೇಲಿಯ ತಂಡವು ಅಂಕಪಟ್ಟಿಯಲ್ಲಿ ಮೂರನೆಯ ಸ್ಥಾನದಲ್ಲಿದೆ. ನಾಲ್ಕು ಪಂದ್ಯಗಳ ಪೈಕಿ ಧರ್ಮಶಾಲಾದಲ್ಲಿ ನಡೆದಿದ್ದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಚ್ಚರಿಯ ಗೆಲುವು ಸಾಧಿಸಿದ್ದ ನೆದರ್ ಲ್ಯಾಂಡ್ಸ್, ಅಂಕ ಪಟ್ಟಿಯಲ್ಲಿ ಆರನೆಯ ಸ್ಥಾನದಲ್ಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News