×
Ad

ವಿಶ್ವಕಪ್ 2023: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ

Update: 2023-10-31 14:05 IST

Photo:X/@cricketworldcup

ಕೋಲ್ಕತ್ತಾ: ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ತಂಡದೆದುರಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ವೇಗದ ಬೌಲರ್ ಗಳಿಗೆ ನೆರವು ನೀಡುವ ನಿರೀಕ್ಷೆ ಇರುವ ಪಿಚ್ ನಲ್ಲಿ ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾದೇಶ ತಂಡವು, ನೆದರ್ ಲ್ಯಾಂಡ್ ತಂಡದೆದುರಿನ ತನ್ನ ಬ್ಯಾಟಿಂಗ್ ವೈಫಲ್ಯದಿಂದ ಹೊರಬರುವ ಸನ್ನಾಹದಲ್ಲಿದೆ.

ವಿಶ್ವಕಪ್ ಸೆಮಿಫೈನಲ್ ನಿಂದ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡವು, ಈ ಪಂದ್ಯದ ಗೆಲುವಿನ ಮೂಲಕ ಕನಿಷ್ಠ ಪಕ್ಷ ಸೋಲಿನ ಸರಪಳಿಯಿಂದ ಹೊರಬರುವ ಪ್ರಯತ್ನದಲ್ಲಿದೆ.

ಒಂದು ಕಡೆ ಬಾಂಗ್ಲಾದೇಶ ತಂಡವು ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ತಂಡವು ಬೌಲಿಂಗ್ ವಿಭಾಗದಲ್ಲಿ ವೈಫಲ್ಯ ಅನುಭವಿಸುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News